PSI ನೇಮಕಾತಿ ಅಕ್ರಮ – ಫಸ್ಟ್ ರ‍್ಯಾಂಕ್ ಪಡೆದಿದ್ದ ಸುಪ್ರಿಯಾ ಬಂಧನ

Team Newsnap
0 Min Read

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿ ಸುಪ್ರಿಯಾಳನ್ನು ಸಿಐಡಿ ತಂಡ ಬಂಧಿಸಿದೆ. ಸುಪ್ರಿಯಾ ಹುಂಡೆಕರ್ (26) ಬಂಧಿತ ಆರೋಪಿ. ಕಲ್ಯಾಣ ಕರ್ನಾಟಕ ಮಹಿಳಾ ಖೋಟಾದಲ್ಲಿ ಸುಪ್ರೀಯಾ ಫಸ್ಟ್ ರ್ಯಾಂಕ್ ಪಡೆದಿದ್ದಳು.

ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಮೂಲಕ ಪರೀಕ್ಷೆಯಲ್ಲಿ ಸುಪ್ರಿಯಾ ಅಕ್ರಮ ನಡೆಸಿದ್ದಳು. ಕಲಬುರಗಿಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಬ್ಲೂಟೂತ್ ಬಳಸಿ, ಪರೀಕ್ಷೆಯಲ್ಲಿ ಅಕ್ರಮ ನಡೆಸಿದ್ದಳು.

ಕಲಬುರಗಿ ಪೋಲಿಸ್ ಠಾಣೆಯಲ್ಲಿ ಸಿಐಡಿ ಪ್ರಕರಣ ದಾಖಲಿಸಿದೆ. ಕಲಬುರಗಿಯಲ್ಲಿ ಪಿಎಸ್‌ಐ ಪ್ರಕರಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳ ಸಂಖ್ಯೆ 52ಕ್ಕೆ ಏರಿಕೆಯಾಗಿದೆ.

Share This Article
Leave a comment