ಕರ್ನಾಟಕದಲ್ಲಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನೇಮಕಾತಿ ಹಗರಣ ಭಾರೀ ಸಂಚಲನ ಮೂಡಿಸಿದ್ದ ಆರೋಪಿ ಆರ್. ಡಿ. ಪಾಟೀಲ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ಗುರುವಾರ ದಾಳಿ ನಡೆಸಿದರು.
ಬೆಳಗ್ಗೆಯಿಂದಲೇ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ನೂರಾರು ಕೋಟಿ ರೂಪಾಯಿ ಹಣ ವರ್ಗಾವಣೆಯಾಗಿದೆ. ಈ ಹಿನ್ನಲೆಯಲ್ಲಿ ಕಲಬುರಗಿ ನಗರದ ಅಕ್ಕಮಹಾದೇವಿ ಕಾಲೋನಿಯಲ್ಲಿರುವ ಆರ್. ಡಿ. ಪಾಟೀಲ್ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.ಕನ್ನಡದ ಯುವ ನಟ ಧನುಷ್ ಇನ್ನಿಲ್ಲ
ಬೆಂಗಳೂರಿನ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪಿಎಸ್‌ಐ ನೇಮಕಾತಿ ಹಗರಣದ ಆರೋಪಿಗಳಾಗಿರುವ ಡಿವೈಎಸ್‌ಪಿ ಶಾಂತಕುಮಾರ್ ಸೇರಿದಂತೆ ಐವರ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿಕೊಂಡಿದೆ.
ಪಿಎಸ್‌ಐ ನೇಮಕಾತಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಂದ ಮಧ್ಯವರ್ತಿಗಳ ಮೂಲಕ ಹಣ ಪಡೆದಿರುವುದು ಸಿಐಡಿ ತನಿಖೆ ವೇಳೆ ತಿಳಿದಿತ್ತು. ಆದ್ದರಿಂದ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.
ಈ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ 3.11 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿದೆ ಎಂದು ಸಿಐಡಿ ಅಧಿಕಾರಿಗಳು ಉಲ್ಲೇಖಿಸಿದ್ದರು. ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್ ಪೌಲ್‌ಗೆ 1.5 ಕೋಟಿ ರೂ. ಹಣ ಸಂದಾಯವಾಗಿದೆ ಎಂಬುದು ಆರೋಪ.
ಈ ಹಗರಣದಲ್ಲಿ ಲಂಚದ ವಹಿವಾಟು ನಡೆದ ಹಿನ್ನಲೆಯಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯ ಕಾಲಂ 7 (ಎ) (ಸಿ), 13 (1)ರ ಅನ್ವಯ ತನಿಖೆ ನಡೆಯಲಿದೆ. ಯಾವ ಆರೋಪಿಗಳು ಯಾವ ಮೂಲದಿಂದ ಹಣ ಸಂಪಾದನೆ ಮಾಡಿದ್ದಾರೆ, ಯಾರಿಗೆ ನೀಡಿದ್ದಾರೆ? ಎಂಬುದು ಸೇರಿದಂತೆ ಹಲವು ಆಯಾಮದಲ್ಲಿ ಇಡಿ ತನಿಖೆ ನಡೆಸಲಿದೆ.
ಪಿಎಸ್‌ಐ ನೇಮಕಾತಿ ಹಗರಣದ ಆರೋಪಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಕೆ. ಹರೀಶ್‌ಗೆ ಕರ್ನಾಟಕ ಹೈಕೋರ್ಟ್ ಬುಧವಾರ ಜಾಮೀನು ನಿರಾಕರಿಸಿತ್ತು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು