ಪಿಯು ಕಾಲೇಜು 4055 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸಮ್ಮತಿ

Team Newsnap
1 Min Read

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 4055 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಸಮ್ಮತಿ ಸೂಚಿಸಿದೆ

2023 -24ನೇ ಶೈಕ್ಷಣಿಕ ಸಾರಿಗೆ 4055 ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ.

ಬಡ್ತಿ, ನಿಧನ, ವಯೋ ನಿವೃತ್ತಿ, ಖಾಲಿ ಇರುವ ಹುದ್ದೆ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಖಾಲಿ ಇರುವ ಸ್ಥಾನಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು.

ಕಾರ್ಯಭಾರ ಹೆಚ್ಚಾಗುವ ಹಿನ್ನೆಲೆಯಲ್ಲಿ ಒಟ್ಟಾರೆ 4055 ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ತಿಳಿಸಲಾಗಿದೆ.ಮಂಡ್ಯ ರೈತರಿಗೆ ಶಾಕ್ – ಹಾಲಿನ ಖರೀದಿ ದರದಲ್ಲಿ ಲೀಟರ್‌ಗೆ 1 ರು ಕಡಿತ

ಸಂಬಂಧಿಸಿದ ಜಿಲ್ಲಾ ಉಪ ನಿರ್ದೇಶಕರಿಗೆ, ಕಾಲೇಜುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದ್ದು, ತಿಂಗಳಿಗೆ 12,000 ರೂ.ವೇತನದಂತೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು.

Share This Article
Leave a comment