ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ವಿದ್ಯಾರ್ಥಿನಿಯೊಬ್ಬಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಧನ್ಯಾ (17) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡವಳು. ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಮನನೊಂದು ನೇಣಿಗೆ ಶರಣಾಗಿದ್ದಾಳೆಂದು ಪೋಲಿಸರು ತಿಳಿಸಿದ್ದಾರೆ. ಈ ಬಗ್ಗೆ ಶಿರಸಿ ಗ್ರಾಮಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿರಸಿಯ ಯಡಳ್ಳಿ ಗ್ರಾಮದ ಧನ್ಯಾ ಶಿರಸಿಯ ಮಾರಿಕಾಂಬಾ ಕಾಲೇಜಿನಲ್ಲಿ ದ್ವಿತೀಯ ಪಿ.ಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದಳು.
ದ್ವಿತೀಯ ಪಿಯುಸಿಯ ಪರೀಕ್ಷೆ ರದ್ದಾಗಿರುವ ಹಿನ್ನೆಲೆಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಖುಷಿಯಿಂದ ಕುಣಿದಾಡುತ್ತಿದ್ದರೆ, ಮತ್ತೊಂದೆಡೆ ತುಂಬಾ ಶ್ರಮಪಟ್ಟು ಓದಿ, ರ್ಯಾಂಕ್ ಬರುವ ನಿರೀಕ್ಷೆಯಲ್ಲಿ ಕಾದುಕುಳಿತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದು ಮಾಡಿರುವ ಪರಿಣಾಮ ಶಾಕ್ ನೀಡುವಂತಾಗಿದೆ.
ತುಂಬಾ ಶ್ರಮಪಟ್ಟು ಓದಿದ್ದೇನೆ, ನಮಗೆ ಪರೀಕ್ಷೆ ಬೇಕು ಎಂದುಕೊಳ್ಳುವ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಪರೀಕ್ಷೆ ಮಾಡಲಾಗುವುದು, ಯಾರೂ ನೊಂದುಕೊಳ್ಳುವ ಅಗತ್ಯವಿಲ್ಲ. ಖಂಡಿತವಾಗಿಯೂ ಪರೀಕ್ಷೆ ನಡೆಸಿ ಅವರ ಆಸೆ ಈಡೇರಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಭರವಸೆ ನೀಡಿದ್ದರೂ ಈ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ