ಪಿಯುಸಿ ಪರೀಕ್ಷೆ ಫಲಿತಾಂಶ : ಗ್ರೇಡ್ ಬದಲು ಅಂಕಗಳ ಮಾದರಿ‌ ಫಲಿತಾಂಶ – ಪಿಯು ನಿರ್ದೇಶಕಿ

Team Newsnap
1 Min Read

ಪಿಯುಸಿ ಪರೀಕ್ಷೆಯನ್ನು ಗ್ರೇಡ್ ಮಾದರಿಯ ಬದಲು ಈ ಬಾರಿ ಹಿಂದಿನ‌ ಮಾದರಿಯಂತೆ ಅಂಕಗಳ ಆಧಾರದಲ್ಲಿ‌ ಪಾಸು ಮಾಡಲು‌ ನಿರ್ಧರಿಸಲಾಗಿದೆ.

ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸ್ನೇಹಲ್, ದ್ವಿತೀಯ ಪಿಯು ಪರೀಕ್ಷೆಯನ್ನು ಕೊರೋನಾ ಕಾರಣಕ್ಕಾಗಿ ರದ್ದು ಮಾಡಿದ ನಂತರ ಪ್ರಥಮ ಪಿಯುಸಿ, ಎಸ್ ಎಸ್ ಎಲ್ ಸಿ ಅಂಕಗಳ ಆಧಾರದ ಮೇಲೆ ಗ್ರೇಡ್ ರೂಪದಲ್ಲಿ ಫಲಿತಾಂಶ ಪ್ರಕಟ ಮಾಡುವ ಘೋಷಣೆ ಮಾಡಲಾಗಿತ್ತು.

ಇದೀಗ ದ್ವಿತೀಯ ಪಿಯು ಫಲಿತಾಂಶದಲ್ಲಿ ಮತ್ತೆ ಬದಲಾವಣೆ ಮಾಡಲಾಗಿದೆ. ಗ್ರೇಡ್ ಬದಲಾಗಿ ಅಂಕಗಳ ಆಧಾರದ ಮೇಲೆಯೇ ಫಲಿತಾಂಶ ಪ್ರಕಟಿಸುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸ್ನೇಹಲ್ ತಿಳಿಸಿದರು.

ದ್ವಿತೀಯ ಪಿಯು ಫಲಿತಾಂಶವನ್ನು ಗ್ರೇಡ್ ಮಾದರಿ ನೀಡಿದರೆ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ತೊಂದರೆಯಾಗಲಿದೆ. ಹೀಗಾಗಿ ಹಳೆಯ ಪದ್ದತಿಯಂತೆಯೇ ಅಂಕಗಳ ಮಾದರಿಯಲ್ಲಿ ಫಲಿತಾಂಶವನ್ನು ಜೂನ್ ಕೊನೆಯ ವಾರದಲ್ಲಿ ಪ್ರಕಟಿಸುವುದಾಗಿ ಹೇಳಿದ್ದಾರೆ.

Share This Article
Leave a comment