ಮಂಡ್ಯ ನಗರದ ಕಾರ್ಮೆಲ್ ಶಿಕ್ಷಣ ಸಂಸ್ಥೆಯಲ್ಲಿ ಪಿಇಯುಸಿ ಮಧ್ಯವಾರ್ಷಿಕ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದೆ, ಈ ಹಿನ್ನೆಲೆಯಲ್ಲಿ ಮಂಡ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಭಾರ ಉಪನಿರ್ದೇಶಕರು ಕಾರ್ಮೆಲ್ ಶಿಕ್ಷಣ ಸಂಸ್ಥೆ ಮೇಲೆ ಶಿಸ್ತು ಕ್ರಮಕ್ಕೆ ನೋಟಿಸ್ ಜಾರಿ ಮಾಡಿದ್ದಾರೆ.
ಇಂದು ನಡೆಯಬೇಕಿದ್ದ ಜೀವಶಾಸ್ತ್ರ ವಿಷಯದ ಪರೀಕ್ಷೆಯನ್ನು ನವೆಂಬರ್ 19ಕ್ಕೆ ಮುಂದೂಡಲಾಗಿದೆ. ನವೆಂಬರ್ 6ರಿಂದ 16ರವರೆಗೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿತ್ತು. ಪ್ರಶ್ನೆ ಪತ್ರಿಕೆಯನ್ನು ನೋಡಲ್ ಅಧಿಕಾರಿ ಮೂಲಕ ಹಂಚಲಾಗಿದೆ.ಇದನ್ನು ಓದಿ –ಟಿಪ್ಪು ಸುಲ್ತಾನ್‌ನ ಖಡ್ಗ 3.4 ಕೋಟಿಗೆ ಹರಾಜು
ಜೀವಶಾಸ್ತ್ರ ಪರೀಕ್ಷಾ ದಿನಾಂಕಕ್ಕಿಂತ ಮುಂಚೆಯೇ ಪ್ರಶ್ನೆ ಪತ್ರಿಕೆ ಬಹಿರಂಗವಾಗಿದೆ. ಇಂದು ನಡೆಯಬೇಕಿದ್ದ ಜೀವಶಾಸ್ತ್ರ ಪರೀಕ್ಷೆ ಎರಡು ದಿನಗಳ ಹಿಂದೆಯೇ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಪರೀಕ್ಷೆ ಮುಂದೂಡಿ ನ.19ಕ್ಕೆ ನಿಗದಿ ಮಾಡಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು