ದ್ವಿತೀಯ PUC ಫಲಿತಾಂಶ ಪ್ರಕಟ : ಬಾಲಕೀಯರೇ ಮೇಲುಗೈ – 4,22,966 ವಿದ್ಯಾರ್ಥಿಗಳು ಪಾಸು

Team Newsnap
1 Min Read
Second PUC result will be announced tomorrow ನಾಳೆ ದ್ವಿತೀಯ PUC ಫಲಿತಾಂಶ ಪ್ರಕಟ

ದ್ವಿತೀಯ PUC ಪರೀಕ್ಷೆಯಲ್ಲಿ 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಈ ಬಾರಿಯ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಶೇ 68.72 ವಿದ್ಯಾರ್ಥಿನಿಯರು ಹಾಗೂ ಶೇ 55.22 ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ವನ್ನು ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ karresults.nic.in ಗೆ ಭೇಟಿ ನೀಡಿ ನೋಡಬಹುದು. ಈ ಫಲಿತಾಂಶ ಕುರಿತಂತೆ ಮಲ್ಲೇಶ್ವರಂನ ಪಿಯು ಬೋರ್ಡ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ದ್ವಿತೀಯ ಪಿಯುಸಿ ಫಲಿತಾಂಶದ ಬಗ್ಗೆ ವಿವರಣೆ ನೀಡಿದರು.

ಈ ಬಾರಿ ಪರೀಕ್ಷೆಯಲ್ಲಿ 61.88 ರಷ್ಟು ಮಕ್ಕಳು ಉತ್ತಿರ್ಣರಾಗಿದ್ದಾರೆ. ಈ ಬಾರಿ ಒಟ್ಟು 599,794 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 402,697 ವಿದ್ಯಾರ್ಥಿಗಳು ಪಾಸಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

  1. ದ್ವೀತಿಯ ಪಿಯು ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ kseeb.karnataka.gov, pue.kar.nic.in ಅಥವಾ karresults.nic.in ಗೆ ಭೇಟಿ ನೀಡಿ.
  2. ನಿಮ್ಮ ಮುಂದೆ ಓಪನ್ ಆದ ಪೇಜ್ ಕಾಣಿಸಿಕೊಳ್ಳುತ್ತದೆ, ಇಲ್ಲಿ ನಿಮಗೆ ಕಾಣಿಸುವ ಪಿಯುಸಿ ಫಲಿತಾಂಶಕ್ಕೆ ಸಂಬಂಧಿಸಿದ ಲಿಂಕ್ ಮೇಲೆ . ಆಗ ನಿಮಗೆ ಇನ್ನೊಂದು ಪೇಜ್ ಓಪನ್ ಆಗುತ್ತದೆ
  1. ಓಪನ್ ಆದ ವೆಬ್ ಪೇಜ್ನಲ್ಲಿ ದ್ವೀತಿಯ ಪಿಯು ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಟೈಪ್ ಮಾಡಿ. ನಂತರ ‘Submit’ ಬಟನ್ ಒತ್ತಿ
  2. ಈಗ ನಿಮಗೆ ನಿಮ್ಮ ಫಲಿತಾಂಶ ಪ್ರದರ್ಶನವಾಗುತ್ತದೆ. ಅದನ್ನು ಡೌನ್ ಲೋಡ್ ಮಾಡಿಕೊಂಡು, ನಿಮ್ಮ ಮುಂದಿನ ಸಂಪರ್ಕಕ್ಕಾಗಿ ಪ್ರಿಂಟ್ ತೆಗೆದುಕೊಂಡರೆ ಒಳಿತು.
Share This Article
Leave a comment