ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ವಸತಿ ಕಾಲೇಜಿನ ಮೊದಲ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ನಡೆದಿದೆ.
ಗೋಕಾಕ್ ತಾಲೂಕಿನ ಶಿಂದಿ ಕುರಬೇಟ್ ಗ್ರಾಮದ ಆಫ್ರೀನ್ ಜಮಾದಾರ್ (17) ಎಂಬ ವಿದ್ಯಾರ್ಥಿನಿ ಮಂಗಳವಾರ ನಡೆಯಲಿರುವ ಪರೀಕ್ಷೆಗಾಗಿ ಸೋಮವಾರ ಮಧ್ಯರಾತ್ರಿ ವಸತಿ ಶಾಲೆಯ ಮೊದಲ ಮಹಡಿಯಲ್ಲಿ ಓದುತ್ತಿದ್ದ ಸಂದರ್ಭದಲ್ಲಿ ಆಯ ತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.
ಇದನ್ನು ಓದಿ – ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಸಚಿವ ಚೆಲುವರಾಯಸ್ವಾಮಿ ಆಕ್ರೋಶ
ಈ ಘಟನೆಗೆ ಸಂಬಂಧಿಸಿದಂತೆ, ಸ್ಥಳೀಯ ಚಿಕ್ಕೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು