ಪುನೀತ್ ರಾಜ್ಕುಮಾರ್ ತೆಗೆದುಕೊಂಡಿದ್ದ ಅಡ್ವಾನ್ಸ್ ಹಣ ನಿರ್ಮಾಪಕರಿಗೆ ವಾಪಸ್ಸು ನೀಡಿರುವ ಅಶ್ವಿನಿ ಪುನೀತ್ ರಾಜ್ಕುಮಾರ್ ಮೆಚ್ಚುಗೆಗೆ ಪಾತ್ರರಾಗಿದ್ದಾರೆ
ಸಿನಿಮಾ ಇಂಡಸ್ಟ್ರಿಯಲ್ಲಿ ಸಂಭಾವನೆ ವಿಚಾರದಲ್ಲಿ ಜಗಳ, ವೈಮನಸ್ಸು ಸಹಜ. ಇಂತಹ ಹಲವು ಕೇಸ್ಗಳು ಮುಂದಿರುವಾಗ ಈಗ ಪುನೀತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಅವರು, ತನ್ನ ಪತಿ ತೆಗೆದುಕೊಂಡ ಅಡ್ವಾನ್ಸ್ ಹಣವನ್ನು ನಿರ್ಮಾಪಕರಿಗೆ ಹಿಂದಿರುಗಿಸಿದ್ದಾರೆ.
ಪುನೀತ್ ನಿಧನರಾಗುವುದಕ್ಕೂ ಮೊದಲು ನಿರ್ಮಾಪಕ ಉಮಾಪತಿ ಅವರೊಂದಿಗೆ ಸಿನಿಮಾ ಮಾಡೋದಾಗಿ ಒಪ್ಪಿಕೊಂಡಿದ್ದರು.
ಅದಕ್ಕಾಗಿ 2.5 ಕೋಟಿ ರು ಅಡ್ವಾನ್ಸ್ ಅನ್ನು ಪಡೆದಿದ್ದರು.
ಅಪ್ಪು ಅಗಲಿಕೆ ನೋವಲ್ಲೂ ನಿರ್ಮಾಪಕ ಉಮಾಪತಿಗೆ ಹಣ ವಾಪಸ್ ಕೊಟ್ಟು ಅಶ್ವಿನಿ ಮಾನವೀಯತೆ ಮರೆದಿದ್ದಾರೆ. ಯಾರಿಗೂ ತೊಂದರೆ ಆಗಬಾರದು ಎಂಬ ಕಾರಣದಿಂದ ವಾಪಸ್ ನೀಡಿದ್ದೇನೆ ಎಂದು ಹೇಳಿದ್ದಾರೆ.
ಜೂನ್- ಜುಲೈನಲ್ಲಿ ಉಮಾಪತಿ ಬ್ಯಾನರ್ ನಲ್ಲಿ ಅಪ್ಪು ಅವರ ಸಿನಿಮಾ ಸೆಟ್ಟೇರಬೇಕಿತ್ತು. ಈ ಚಿತ್ರವನ್ನು ನಿರ್ದೇಶಕ ತರಣ್ ಸುಧೀರ್ ನಿರ್ದೇಶನ ಮಾಡಬೇಕಿತ್ತು.
ತರುಣ್ ಸುದೀರ್ ಅವರು ಪುನೀತ್ ರಾಜ್ ಕುಮಾರ್ ಅವರಿಗೆ ಕಥೆ ಹೇಳಿ ಫೈನಲ್ ಕೂಡ ಮಾಡಿದ್ದರು. ಆದರೆ ಈ ನಡುವೆ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನದಿಂದ ಪ್ರಾಜೆಕ್ಟ್ ಕ್ಯಾನ್ಸಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಉಮಾಪತಿ ಶ್ರೀನಿವಾಸ್ ಅವರಿಗೆ ಮುಂಗಡ ಹಣವನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ವಾಪಸ್ ನೀಡಿದ್ದಾರೆ.
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
More Stories
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ