BBMP ಕೇಂದ್ರ ಕಚೇರಿ ಆವರಣದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಪುತ್ಥಳಿ ನಿರ್ಮಾಣ ಆಗಲಿದೆ.
ಪುನೀತ್ ರಾಜ್ ಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಪಾಲಿಕೆ ನೌಕರರು ಒತ್ತಾಯ ಮಾಡಿದ್ದು, ಅನುಮತಿ ಕೋರಿ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪಾಲಿಕೆ ನೌಕರರ ಸಂಘ ಮನವಿ ಮಾಡಿದೆ. ಸದ್ಯ ನೌಕರರ ಮನವಿ ಸ್ವೀಕರಿಸಿರುವ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಪುನೀತ್ ಪುತ್ಥಳಿ ನಿರ್ಮಾಣದ ಭರವಸೆಯನ್ನು ನೀಡಿದ್ದಾರೆ.
ಸರ್ಕಾರಕ್ಕೆ ಮಾಹಿತಿ ನೀಡಿ ಅನುಮತಿ ಕೊಡಿಸುವ ಭರವಸೆಯನ್ನು ನೀಡಿದ್ದಾರೆ.
ಒಂದು ವೇಳೆ ಸರ್ಕಾರ ಅನುಮತಿ ಕೊಟ್ಟರೆ ಶೀಘ್ರದಲ್ಲೇ ಪಾಲಿಕೆ ಆವರಣದಲ್ಲಿ ಪವರ್ ಸ್ಟಾರ್ ಪ್ರತಿಮೆ ತಲೆ ಎತ್ತಲಿದೆ. ಸದ್ಯ ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿ ಡಾ.ರಾಜ್ ಕುಮಾರ್, ಡಾ.ಬಿ.ಆರ್.ಅಂಬೇಡ್ಕರ್ ಸೇರಿ ನಾಲ್ಕು ಪುತ್ಥಳಿ ನಿರ್ಮಾಣ ಮಾಡಲಾಗಿದೆ. ಇದೀಗ ಪುನೀತ್ ರಾಜ್ ಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಬಿಬಿಎಂಪಿ ಒಲವು ತೋರಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು