December 2, 2021

Newsnap Kannada

The World at your finger tips!

ಬೆಂಗಳೂರಿನಲ್ಲಿ ಇಂದು ಪುನೀತ್ ನಮನ ಕಾರ್ಯಕ್ರಮ: ಕಲಾವಿದರು- ಗಣ್ಯರಿಗೆ ಮಾತ್ರ ಪ್ರವೇಶ

Spread the love

ಬೆಂಗಳೂರಲ್ಲಿ ಇಂದು ನಡೆಯಲಿರುವ ‘ಪುನೀತ್ ನಮನ’ ಕಾರ್ಯಕ್ರಮಕ್ಕೆ ಸಿದ್ದತೆಗಳು ಪೂಣ೯ಗೊಂಡಿವೆ. ಅಭಿಮಾನಿಗಳಿಗೆ ಭಾಗವಹಿಸಲು ಅವಕಾಶವೇ ಇಲ್ಲ. 2000 ಮಂದಿ ಚಿತ್ರರಂಗ ಹಾಗೂ ರಾಜಕೀಯ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ‘ಪುನೀತ ನಮನ’ ಕಾರ್ಯಕ್ರಮವನ್ನು ಆಯೋಜಿಸಿದೆ.

ಮಧ್ಯಾಹ್ನ ಅರಮನೆ ಮೈದಾನದ ಗಾಯತ್ರಿ ವಿಹಾರ್​​ನಲ್ಲಿ ದಿವಂಗತ ಪುನೀತ್​ ರಾಜ್​ಕುಮಾರ್ ಗೆ ನಮನ ಸಲ್ಲಿಸಲಾಗುವುದು

2000 ಜನರಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ. ಸಿಎಂ, ಮಾಜಿ ಸಿಎಂ ಹಾಗೂ ರಾಜಕಾರಣಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಪಾಸ್​ ಇದ್ದವರಿಗೆ ಮಾತ್ರ ಕಾರ್ಯಕ್ರಮಕ್ಕೆ ಪ್ರವೇಶವಿದೆ.

ನಟರಾದ ಸುದೀಪ್, ಯಶ್, ಗಣೇಶ್, ಉಪೇಂದ್ರ, ರವಿಚಂದ್ರನ್, ಶ್ರೀಮುರಳಿ, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಧ್ರುವ ಸರ್ಜಾ ಸೇರಿದಂತೆ‌ ಕನ್ನಡದ ಎಲ್ಲಾ ಕಲಾವಿದರು ಭಾಗಿ ಆಗಲಿದ್ದಾರೆ.

ಚಿತ್ರ ಸಾಹಿತಿ ನಾಗೇಂದ್ರ ಪ್ರಸಾದ್ ಬರೆದಿರುವ ಹಾಡಿಗೆ ಗುರುಕಿರಣ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಗೀತೆಯ ಮೂಲಕ ನಮನ ಕಾರ್ಯಕ್ರಮ ಆರಂಭ ಆಗಲಿದೆ. ವಿಜಯ್ ಪ್ರಕಾಶ್, ಗುರುಕಿರಣ್ ಹಾಗೂ ರಾಜೇಶ್ ಕೃಷ್ಣನ್ ಅವರಿಂದ ಗೀತ ನಮನ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನ ಇಲ್ಲ. ಸ್ಯಾಂಡಲ್​​ವುಡ್​​ನ 142 ಕಲಾವಿದರಿಗೆ ಆಮಂತ್ರಣ ನೀಡಲಾಗಿದೆ. ಪರಭಾಷೆಯ 40 ಕ್ಕೂ ಹೆಚ್ಚು ಕಲಾವಿದರು ಬರುವ ನಿರೀಕ್ಷೆ ಇದೆ.

ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್ ಸೇರಿ ದೊಡ್ಮನೆ ಕುಟುಂಬದ ಎಲ್ಲಾ ಸದಸ್ಯರು ಕಾರ್ಯಕ್ರಮಕ್ಕೆ ಬರಲಿದ್ದಾರೆ.

error: Content is protected !!