ಸಿಎಂ ಅರವಿಂದ್ ಕೇಜ್ರಿವಾಲ್ ಪತ್ನಿ ಸುನೀತಾ ತನ್ನ ‘ಸೋದರ ಮಾವ’ ಪಂಜಾಬ್ ಎಎಪಿ ಸಿಎಂ ಅಭ್ಯರ್ಥಿ ಭಗವಂತ್ ಮಾನ್ ಪರ ನಾಳೆಯಿಂದ ಪ್ರಚಾರದ ಕಣಕ್ಕೆ ಧುಮುಕಲಿದ್ದಾರೆ.
ಅರವಿಂದ್ ಕೇಜ್ರಿವಾಲ್ ಪತ್ನಿ ಸುನೀತಾ ಮತ್ತು ಪುತ್ರಿ ಹರ್ಷಿತಾ ಶುಕ್ರವಾರ ಪಂಜಾಬ್‍ಗೆ ಭೇಟಿ ನೀಡಲಿದ್ದಾರೆ.
ಮುಂದಿನ ವಾರ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದ ಪರ ಪ್ರಚಾರ ನಡೆಸಲಿದ್ದಾರೆ.
ಈ ಕುರಿತು ಸುನೀತಾ ಅವರೇ ಟ್ವಟ್ಟರ್‌ನಲ್ಲಿ, ನಾಳೆ ನನ್ನ ಸೋದರ ಮಾವ ಭಗವಂತ್ ಮಾನ್ ಅವರಿಗೆ ಮತ ಕೇಳಲು ನಾನು, ನನ್ನ ಮಗಳೊಂದಿಗೆ ಧುರಿಗೆ ಹೋಗುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಮಾನ್ 2022ರ ಪಂಜಾಬ್ ಚುನಾವಣೆಗೆ ಎಎಪಿ ಸಿಎಂ ಅಭ್ಯರ್ಥಿ. ಧುರಿಯಿಂದ ಸ್ಪರ್ಧಿಸಲಿದ್ದಾರೆ. ಇವರು ಸಂಗ್ರೂರ್ ನಿಂದ ಎರಡು ಬಾರಿ ಸಂಸದರಾಗಿದ್ದಾರೆ.
ಕಳೆದ ತಿಂಗಳು ಕೇಜ್ರಿವಾಲ್ ಅವರು, ನಿಮ್ಮ ಸಿಎಂ ಅಭ್ಯರ್ಥಿಯನ್ನು ನೀವೇ ಆಯ್ಕೆ ಮಾಡಿ ಎಂದು ಫೋನ್ ನಂಬರ್ ಬಿಡುಗಡೆ ಮಾಡಿದ್ದರು. ಫೋನ್ ಮಾಡಿದ ಜನರಲ್ಲಿ 93% ಜನರು ಮಾನ್ ಅವರ ಹೆಸರನ್ನು ಸೂಚಿಸಿದ್ದರು. ಪರಿಣಾಮ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ಮುಂದಿನ ಸಿಎಂ ಆಭ್ಯರ್ಥಿಯಾಗಿ ಮಾನ್ ಅವರನ್ನು ಘೋಷಿಸಿದರು. ಈ ವೇಳೆ ಕೇಜ್ರಿವಾನ್ ಅವರು, ಎಎಪಿ ಪಂಜಾಬ್ ಚುನಾವಣೆಯಲ್ಲಿ ಗೆಲ್ಲುವುದು ಸ್ಪಷ್ಟವಾಗಿದೆ ಎಂದಿದ್ದರು.
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
- ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
- ನಾಳೆ ರಾಜ್’ಘಾಟ್ನಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಸಂಸ್ಕಾರ
- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ