ರಾಜ್ಯ ಸರ್ಕಾರದಿಂದ ರಿಯಾಯಿತಿ ದರದಲ್ಲಿ ಪ್ರಯಾಣಿಕರಿಗೆ ಪುಣ್ಯ ಕ್ಷೇತ್ರಗಳ ಟೂರ್ ಪ್ಯಾಕೇಜ್

Team Newsnap
2 Min Read
Punya Kshetra tour package for travelers at discounted rates from the state government ರಾಜ್ಯ ಸರ್ಕಾರದಿಂದ ರಿಯಾಯಿತಿ ದರದಲ್ಲಿ ಪ್ರಯಾಣಿಕರಿಗೆ ಪುಣ್ಯ ಕ್ಷೇತ್ರಗಳ ಟೂರ್ ಪ್ಯಾಕೇಜ್

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಪ್ರಯಾಣಿಕರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ರಿಯಾಯಿತಿ ದರದಲ್ಲಿ ಪುಣ್ಯ ಕ್ಷೇತ್ರಗಳ ಟೂರ್ ಪ್ಯಾಕೇಜ್ ಪರಿಚಯಗೊಳಿಸಿದೆ.

2022-23ನೇ ಸಾಲಿಗೆ ಜಾರಿ ಬರುವಂತೆ ಕರ್ನಾಟಕ ರಾಜ್ಯದಿಂದ ಪುಣ್ಯ ಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್-ರಾಜ್‌ ಕ್ಷೇತ್ರಗಳಿಗೆ ಕಡಿಮೆ ವೆಚ್ಚದಲ್ಲಿ ತೆರಳಲು ಅನುಕೂಲವಾಗುವಂತೆ ರಿಯಾಯಿತಿ ದರದಲ್ಲಿ ಪ್ಯಾಕೇಜ್‌ ರೂಪಿಸಿ “ಕರ್ನಾಟಕ ಭಾರತ್‌ ಗೌರವ ಕಾಶಿ ದರ್ಶನ” ಯೋಜನೆಯನ್ನು IRCTC ಮತ್ತು ಭಾರತೀಯ ರೈಲ್ವೇ ಇಲಾಖೆಯ ಸಹಯೋಗದೊಂದಿಗೆ ವಿಶೇಷ ರೈಲಿನ ಮೂಲಕ ಕೈಗೊಳ್ಳಲಾಗಿದೆ ಎಂದಿದ್ದಾರೆ.

  • ಯೋಜನೆಯಡಿ ಪ್ರಯಾಣಿಸುವ ಯಾತ್ರಾರ್ಥಿಗಳಿಗೆ
    • ತಲಾ ರೂ. 20,000/-ಗಳಂತೆ ಪ್ಯಾಕೇಜ್‌ ರೂಪಿಸಿದ್ದು, ಈ ಮೊತ್ತದಲ್ಲಿ ತಲಾ ರೂ. 5,000/-ಗಳನ್ನು ರಾಜ್ಯ ಸರ್ಕಾರದ ವತಿಯಿಂದ ಭರಿಸಿ ಉಳಿದ ಮೊತ್ತ ರೂ. 15,000/-ಗಳನ್ನು ಯಾತ್ರಾರ್ಥಿಗಳು ಪಾವತಿಸಬೇಕಾಗಿರುತ್ತದೆ.
  • ಪ್ರವಾಸದಲ್ಲಿ ಏನು ಸೇರಿಸಲಾಗಿದೆ
    • ರೈಲಿನಲ್ಲಿ ತೆರಳುವ ಯಾತ್ರಾರ್ಥಿಗಳಿಗೆ ಉಪಹಾರ, ಊಟ, ತಂಗುವಿಕೆ, ಸ್ಥಳೀಯ ಸಾರಿಗೆ ಮತ್ತು ಸ್ಥಳೀಯ ವೀಕ್ಷಣೆ ಒಳಗೊಂಡಿದೆ.
  • ಎಷ್ಟು ದಿನಗಳ ಪ್ರವಾಸ
    • 07 ದಿನಗಳ ಪ್ರವಾಸ

ಈ ಯೋಜನೆಯಡಿ 03 ಟ್ರಿಪ್‌ಗಳನ್ನು ಪೂರೈಸಿದ್ದು, ಸದರಿ ವಿಶೇಷ ರೈಲಿನಲ್ಲಿ ಒಟ್ಟು 1644 ಯಾತ್ರಾರ್ಥಿಗಳು ಯಾತ್ರೆ ಪೂರೈಸಿದ್ದು, ಸದರಿ ಯಾತ್ರಾರ್ಥಿಗಳಿಗೆ ಪ್ರಯಾಣದ ಒಟ್ಟು ಪ್ಯಾಕೇಜ್‌ದರ ರೂ. 20,000/-ಗಳ ಪೈಕಿ ಸರ್ಕಾರದಿಂದ ತಲಾ ರೂ. 5,000/-ಗಳಂತೆ 82.20 ಲಕ್ಷಗಳ ಸಹಾಯಧನವನ್ನು ವಿತರಿಸಲಾಗಿರುತ್ತದೆ ಎಂದಿದ್ದಾರೆ.

ಈಗ ನಾಲ್ಕನೇ ಟ್ರಿಪ್ಪಿನ ವಿಶೇಷ ರೈಲು ದಿನಾಂಕ: 29.07.2023ರಂದು ಬೆಂಗಳೂರಿನಿಂದ ಹೊರಡಲಿದ್ದು, ಸದರಿ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳು ಈ ಕೆಳಕಂಡ ಲಿಂಕ್‌ ಮೂಲಕ ಅಥವಾ ಐ.ಆರ್.ಸಿ.ಟಿ.ಸಿ (IRCTC) ಪೋರ್ಟಲ್‌https://www.irctctourism.com ಮೂಲಕ ತಮ್ಮ ಟಿಕೇಟ್‌ ಅನ್ನು ಕಾಯ್ದಿರಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.ಅಧಿವೇಶನದಲ್ಲಿ ಹೈಡ್ರಾಮ: ಬಿಜೆಪಿಯ 10 ಶಾಸಕರು ಅಮಾನತು- ಎಳೆದು ತಂದ ಮಾರ್ಶಲ್‌ಗಳು – ಯತ್ನಾಳ್ ಅಸ್ವಸ್ಥ

ಈಗ ಹೊಸದಾಗಿ ಸುಸಜ್ಜಿತ LHB ಕೋಚ್‌ಗಳನ್ನು ಅಳವಡಿಸಲಾಗಿದ್ದು, ಇದು ಸುಸಜ್ಜಿತವಾದ ಸ್ಥಳದಲ್ಲಿಯೇ ಅಡುಗೆ ತಯಾರು ಮಾಡುವ ಅಡುಗೆ ಮನೆ (PANTRY CAR) ಒಳಗೊಂಡಿರುತ್ತದೆ ಹಾಗೂ ಯಾತ್ರಾರ್ಥಿಗಳ ಹಿತ ದೃಷ್ಟಿಯಿಂದ ಇಬ್ಬರು ವೈದ್ಯರು ಸಹ ಪ್ರಯಾಣಿಸುವರು ಎಂದು ಮಾಹಿತಿ ನೀಡಿದ್ದಾರೆ.

Share This Article
Leave a comment