ಉತ್ತರಾಖಂಡ್ ಸಿಎಂ ತೀರಥ್ ಸಿಂಗ್ ರಾವತ್ ರಾಜೀನಾಮೆ ಬಳಿಕ ಇದೀಗ ಪಕ್ಷ ನೂತನ ಸಿಎಂ ಸ್ಥಾನಕ್ಕೆ ಪುಷ್ಕರ್ ಸಿಂಗ್ ಧಾಮಿಯನ್ನು ಆಯ್ಕೆ ಮಾಡಿದೆ.
ಬಿಜೆಪಿ ಶಾಸಕಾಂಗ ಸಭೆಯಲ್ಲಿ ಖಟಿಮಾ ಕ್ಷೇತ್ರದ ಶಾಸಕರಾಗಿರುವ ಪುಷ್ಕರ್ ಸಿಂಗ್ ಧಾಮಿ ಉತ್ತರಾಖಂಡ್ನ ನೂತನ ಸಿಎಂ ಎಂದು ಬಿಜೆಪಿ 57 ಶಾಸಕರು ಒಮ್ಮತದಿಂದ ಆಯ್ಕೆ ಮಾಡಿದ್ದಾರೆ.
ಉತ್ತರಾಖಂಡ್ನ 11ನೇ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ನಾಳೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
ಪುಷ್ಕರ್ ಸಿಂಗ್ ಧಾಮಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಆಪ್ತರಾಗಿದ್ದಾರೆ. 45 ವರ್ಷದ ಇವರು ಉಧಮ್ ಸಿಂಗ್ ಜಿಲ್ಲೆಯ ಖಟಿಮಾ ವಿಧಾನಸಭಾ ಕ್ಷೇತ್ರವನ್ನ 2 ಬಾರಿ ಪ್ರತಿನಿಧಿಸಿ ಗೆದ್ದಿದ್ದಾರೆ. ಈ ಹಿಂದೆ ಭಗತ್ ಸಿಂಗ್ ಕೋಶ್ಯರಿ ಸಿಎಂ ಆಗಿದ್ದ ವೇಳೆ ಧಾಮಿ ವಿಶೇಷ ಅಧಿಕಾರಿಯಾಗಿ ಕೆಲಸ ಮಾಡಿದ್ದರು.
ಸಿಎಂ ಆಗಿ ಆಯ್ಕೆ ಆಗುತ್ತಿದ್ದಂತೆ ಧಾಮಿ ಅವರು ರಾಜ್ಯಪಾಲರ ಭೇಟಿಗೆ ಅವಕಾಶ ಕೇಳಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ರಾಜಭವನಕ್ಕೆ ತೆರಳಿರುವ ಧಾಮಿ, ಇಂದೇ ಪ್ರಮಾಣವಚನ ಸ್ವೀಕಾರಕ್ಕೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ.
ನಾನೊಬ್ಬ ಮಾಜಿ ಸೈನಿಕನ ಮಗ. ಸಾಮಾನ್ಯ ಕಾರ್ಯಕರ್ತನನ್ನು ಇಂದು ಸಿಎಂ ಸ್ಥಾನಕ್ಕೆ ಪಕ್ಷ ಆಯ್ಕೆ ಮಾಡಿದೆ. ಜನರ ಒಳಿತಾಗಿ ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡುತ್ತೇವೆ. ನಮಗೆ ಇರುವ ಕಡಿಮೆ ಅವಧಿಯಲ್ಲಿ ನಾವು ಜನರ ಸೇವೆಯನ್ನು ಸವಾಲ್ ಆಗಿ ಸ್ವೀಕರಿಸಿ ಕೆಲಸ ಮಾಡಬೇಕಿದೆ ಅಂತಾ ಧಾಮಿ ಹೇಳಿದ್ದಾರೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ