ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಶ್ರೀ ಕ್ಷೇತ್ರದಲ್ಲಿ ನಡೆದ ಒಕ್ಕಲಿಗ ವಧು-ವರ ಸಮಾವೇಶದಲ್ಲಿ ಕಂಡು ಬಂದ ದೃಷ್ಯ ಇದು.ಮಂಡ್ಯದಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಚಕ್ರದಡಿ ಸಿಕ್ಕಿ ಯೋಧ ಬಲಿ
ರೈತ ದೇಶದ ಬೆನ್ನೆಲುಬು. ರೈತನಿದ್ದರೆ ಮಾತ್ರ ದೇಶ ಸುಭೀಕ್ಷವಾಗಿ ಇರುತ್ತೆ ಅಂತಾ ಹೇಳ್ತಾರೆ. ಆದರೆ ಇದೀಗ ಅಂತಹ ರೈತ ಮದುವೆಯಾಗಲು ಹುಡುಗಿ ಸಿಗುತ್ತಿಲ್ಲ. ಮದುವೆಯಾಗಲು ರೈತ ಹೆಣ್ಣು ಕೇಳಲು ಹೋದ್ರೆ, ಹೆಣ್ಣೆತ್ತವರು ನಾವು ರೈತರಿಗೆ ನಮ್ಮ ಮಗಳನ್ನು ಕೊಡುವುದಿಲ್ಲ. ನಾವು ಪಟ್ಟಣದಲ್ಲಿ ಕೆಲಸದಲ್ಲಿ ಇರುವವರಿಗೆ ನಮ್ಮ ಮಗಳನ್ನು ಕೊಡ್ತೀವಿ ಎನ್ನುವವರ ಸಂಖ್ಯೆಯೇ ಹೆಚ್ಚಾಗಿದೆ. ಹೀಗಾಗಿ ರೈತ ಯುವಕರು ದಾಂಪತ್ಯ ಜೀವನ ತುಳಿಯಲು ಹುಡುಗಿ ಸಿಗದೇ ಮಂಡ್ಯ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪರದಾಡುತ್ತಿದ್ದಾರೆ.
ಭಾನುವಾರ ಆದಿಚುಂಚನಗಿರಿ ಯಲ್ಲಿ ನಡೆದ ವಧು-ವರರ ಸಮಾವೇಶದಲ್ಲಿ ಮಂಡ್ಯ ಜಿಲ್ಲೆ ಸೇರಿದಂತೆ ರಾಜ್ಯದ ನಾನ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ವಧು-ವರರ ಆಯ್ಕೆಗೆ ಬಂದಿದ್ದರು.
ಸುಮಾರು 12 ಸಾವಿರ ಮಂದಿ ಸಮಾವೇಶದಲ್ಲಿ ಹೆಸರು ನೊಂದಣಿ ಮಾಡಕೊಂಡಿದ್ದರು ಈ ಪೈಕಿ 250 ಮಂದಿ ಮಾತ್ರ ಹುಡುಗಿಯರು ವರನಿಗಾಗಿ ರಿಜಿಸ್ಟರ್ ಮಾಡಿಕೊಂಡಿದ್ದಾರೆ. ಉಳಿದ 11,750 ಮಂದಿ ಯುವಕರು ದಾಂಪತ್ಯ ಜೀವನಕ್ಕೆ ಕಾಲಿಡಲು ವಧುವಿಗಾಗಿ ಹುಡುಕಾಟ ನಡೆಸಲು ರಿಜಿಸ್ಟರ್ ಮಾಡಿಕೊಂಡಿದ್ದಾರೆ. ಈ ಪೈಕಿ ಅತೀ ಹೆಚ್ಚು ರೈತ ಸಮುದಾಯದ ಯುವಕರೇ ಇರುವುದು ಆಶ್ಚರ್ಯದ ಸಂಗತಿಯಾಗಿದೆ.
ಮದುವೆಯಾಗಲು ರೈತರಿಗೆ ಹೆಣ್ಣು ಸಿಗುತ್ತಿಲ್ಲ ಎಂದರೆ ರೈತರ ಸ್ಥಿತಿ ಎಷ್ಟರ ಮಟ್ಟಿಗೆ ಇದೆ ಎಂಬುದು ಇದರಿಂದಲೇ ತಿಳಿಯುತ್ತದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು