ನ್ಯೂಸ್ ಸ್ನ್ಯಾಪ್.
ಬೆಂಗಳೂರು.
ಕನ್ನಡ ಚಿತ್ರರಂಗದಿಂದ ಮರೆಯಾಗಿದ್ದ ನಟಿ ರಾಧಿಕಾ ಕುಮಾರಸ್ವಾಮಿ ಮತ್ತೆ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟದ್ದು ‘ಸ್ವೀಟಿ’ ಮೂಲಕ.ಈಗ ಅವರು ದಮಯಂತಿ ಮತ್ತು ಭೈರಾದೇವಿ ಚಿತ್ರಗಳಲ್ಲಿ ನಟಿಸಲು ಮುಂದಾಗಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ಆಗುವ ಎಲ್ಲಾ ಲಕ್ಷಣಗಳನ್ನೂ ಹೊಂದಿರುವ ದಮಯಂತಿ ಚಿತ್ರದ ಟೀಸರ್ ಬಿಡುಗಡೆಯಾಯಿತು.ಈ ವೇಳೆ ಸುದ್ದಿಗಾರೊಂದಿಗೆ ಮಾತನಾಡಿದ ರಾಧಿಕ ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.
ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ನಾನು ರಾಜಕೀಯ ಪ್ರವೇಶ ಮಾಡುತ್ತಿದ್ದೇನೆ ಎಂಬ ಸುದ್ದಿ ವೈರಲ್ ಆಗಿದೆ. ಆದರೆ ನಾನು ರಾಜಕೀಯ ಪ್ರವೇಶ ಮಾಡುವುದಿಲ್ಲ. ಆ ಕ್ಷೇತ್ರ ನಂಗೆ ಒಗ್ಗಲ್ಲ. ನಟಿಯಾಗಿಯೇ ಇರಬಯಸುತ್ತೇನೆ. ನಾನು ಚಿಕ್ಕ ವಯಸ್ಸಿನಿಂದಲೇ ನಟಿಯಾಗಬೇಕು ಎಂದು ಕನಸು ಕಂಡಿದ್ದವಳು. ಎಷ್ಟು ಕಾಲ ಸಾಧ್ಯವೋ ಅಷ್ಟು ಕಾಲ ನಟನೆಯನ್ನು ಮಾಡುತ್ತೇನೆ. ನಂತರ ಚಿತ್ರ ನಂತರ ಚಿತ್ರ ನಿರ್ಮಾಣದಲ್ಲಿ ತೊಡಗಿಕೊಳ್ಳುವೆ. ಆದರೆ ನನಗೆ ರಾಜಕೀಯಕ್ಕೆ ಬರಲು ಯಾವುದೇ ರೀತಿಯ ಆಸಕ್ತಿ ಇಲ್ಲ’ ಎನ್ನುವ ಮೂಲಕ ಅಭಿಮಾನಿಗಳಲ್ಲಿದ್ದ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
More Stories
ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ