ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ರಾಗಿಣಿ, ಸಂಜನಾ ಜಾಮೀನು ಅರ್ಜಿ ವಜಾ; ಮತ್ತೆ ಜೈಲುವಾಸ ಗತಿಯಾಗಿದೆ.
ಈ ಬಾರಿಯ ಬೆಳಕಿನ ಹಬ್ಬ ದೀಪಾವಳಿಯನ್ನೂ ಜೈಲಿನಲ್ಲಿ ಕಳೆಯುವ ಸಾಧ್ಯತೆ ಇದೆ.
ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾನಿ ಜಾಮೀನು ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ. ರಾಗಿಣಿ ಮತ್ತು ಸಂಜನಾ ಸೇರಿದಂತೆ ಒಟ್ಟು 6 ಮಂದಿ ಆರೋಪಿಗಳು ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದರು.
ರಾಗಣಿ 50 ದಿನ ಹಾಗೂ ಸಂಜನಾ 48 ದಿನಗಳಿಂದ ಜೈಲಿನಲ್ಲೇ ಕಾಲ ಕಳೆಯುತ್ತಿದ್ದಾರೆ.
ಜಾಮೀನು ನೀಡದಂತೆ ಸಿಸಿಬಿ ವಾದ
ರಾಗಿಣಿ, ಸಂಜನಾಗೆ ಜಾಮೀನು ಕೊಡಬಾರದು. ಸಾಕ್ಷ್ಯ ನಾಶದ ಆರೋಪ ಇಬ್ಬರ ಮೇಲೆ ಇವೆ. ಇಬ್ಬರ ವಿರುದ್ಧವೂ ಡಿಜಿಟಲ್ ಸಾಕ್ಷ್ಯ ಲಭ್ಯವಾಗಿದೆ. ಪ್ರಕರಣದ ಪ್ರಮುಖ ಆರೋಪಿಗಳ ಬಂಧನವಾಗಿಲ್ಲ. ಜಾಮೀನು ಕೊಟ್ಟರೆ ಇಬ್ಬರು ಪ್ರಭಾವಿಗಳಾಗಿದ್ದರಿಂದ ಪ್ರಕರಣದ ಪ್ರಭಾವ ಬೀರುವ ಸಾಧ್ಯತೆಗಳಿವೆ ಹಾಗಾಗಿ ಜಾಮೀನು ನೀಡ ಕೂಡದು ಎಂದು ಸಿಸಿಬಿ ಪರ ವಕೀಲರು ವಾದ ಮಂಡಿಸಿದ್ದಾರೆ.
ಡ್ರಗ್ ಕೇಸಲ್ಲಿ ರಾಗಿಣಿ ಅಮಾಯಕಿ. ನಮ್ಮ ಕಕ್ಷಿದಾರರ ವಿರುದ್ಧ ಅನಗತ್ಯ ಆರೋಪಗಳನ್ನ ಮಾಡಲಾಗಿದೆ. ಸಿಸಿಬಿ ಪೊಲೀಸರ ದಾಳಿ ವೇಳೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಡ್ರಗ್ ಕೇಸಲ್ಲಿ ಸುಮ್ಮನೆ ಸಿಲುಕಿಸಲಾಗಿದೆ ಎಂದು ರಾಗಿಣಿ ಪರ ವಕೀಲರು ನ್ಯಾಯಲಯದ ಗಮನಕ್ಕೆ ತಂದಿದ್ದಾರೆ. ರಾಗಿಣಿ ಹಾಗೂ ಸಂಜನಾ ಗಲ್ರಾನಿ ಜಾಮೀನು ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ. ರಾಗಿಣಿ ಮತ್ತು ಸಂಜನಾ ಸೇರಿದಂತೆ ಒಟ್ಟು ಆರೋಪಿಗಳು ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದರು.
ಮಾದಕ ದ್ರವ್ಯ ವ್ಯಸನಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 4 ರಂದು ಸಿಸಿಬಿ ಪೊಲಿಸರು ಮೊದಲು ನಟಿ ರಾಗಿಣಿ ಮನೆ ಮೇಲೆ ದಾಳಿ ಮಾಡಿದ್ದರು. ರಾಗಿಣಿ ನಿವಾಸದ ಮೇಲೆ ದಾಳಿ ನಡೆಸಿದ್ದು ಅಧಿಕಾರಿಗಳು ವಿಚಾರಣೆಗಾಗಿ ನಟಿಯನ್ನ ಸಿಸಿಬಿ ಕಚೇರಿಗೆ ಕರೆ ತಂದಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿ, ರಾತ್ರಿ ಮಹಿಳಾ ಸಾಂತ್ವನ ಕೇಂದ್ರದಲ್ಲಿರಿಸಿ ವಿಚಾರಣೆ ನಡೆಸಿತ್ತು. ಎನ್‍ಡಿಪಿಎಸ್ ಕೋರ್ಟ್ ನಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ನಟಿಯನ್ನ ಪರಪ್ಪನ ಅಗ್ರಹಾರದಲ್ಲಿರಿಸಲಾಗಿತ್ತು. ಅಕ್ರಮ ಹಣ ವರ್ಗಾವಣೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದ ಜಾರಿ ನಿರ್ದೇಶನಾಲಯ ನ್ಯಾಯಾಲಯದ ಅನುಮತಿ ಪಡೆದು ಜೈಲಿನಲ್ಲಿಯೇ ವಿಚಾರಣೆ ನಡೆಸಿತ್ತು.
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
More Stories
ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು