February 20, 2026

Newsnap Kannada

The World at your finger tips!

ragini dwivedi

ಡ್ರಗ್ಗಿಣಿ, ನಟಿ ರಾಗಿಣಿ ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು

Spread the love

ಡ್ರಗ್ಸ್ ಮಾರಾಟ ಜಾಲ ದಂಧೆ ಪ್ರಕರಣದಲ್ಲಿ ಕಳೆದ ಐದು ತಿಂಗಳಿ
ನಿಂದ ಪರಪ್ಪನ ಅಗ್ರಹಾರ ಕಾರಾಗೃಹ ದಲ್ಲಿರುವ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸುಪ್ರೀಂ ಕೋಟ್೯ ನಿಂದ ಜಾಮೀನು ಸಿಕ್ಕಿದೆ.

ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗುರುವಾರ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು ಮಾಡಿದೆ.

ಸೆಷನ್ಸ್ ಮತ್ತು ಹೈಕೋರ್ಟ್ ಜಾಮೀನು ನಿರಾಕರಿಸಿದ್ದರಿಂದ ರಾಗಿಣಿ ಪರ ವಕೀಲರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ಇಂದಿಗೆ ಮುಂದೂಡಲಾಗಿತ್ತು.

ಅನೇಕ ಸೆಲೆಬ್ರಿಟಿಗಳಿಗೆ ಮತ್ತು ಪ್ರಮುಖ ವ್ಯಕ್ತಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದವರೊಂದಿಗೆ ನಂಟು ಹೊಂದಿದ್ದ ಆರೋಪದ ಮೇಲೆ ಕಳೆದ ಸೆಪ್ಟೆಂಬರ್ 4ರಂದು ನಟಿ ರಾಗಿಣಿ ಅವರನ್ನು ಸಿಸಿಬಿ ಪೊಲೀಸರು ಬೆಂಗಳೂರಿನ ಯಲಹಂಕದಲ್ಲಿರುವ ಅವರ ಅಪಾರ್ಟ್ ಮೆಂಟ್ ನಲ್ಲಿ ಬಂಧಿಸಿದ್ದರು.

error: Content is protected !!