June 1, 2023

Newsnap Kannada

The World at your finger tips!

rahul dravid

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಬಿಜೆಪಿ ಸೇರ್ಪಡೆ ?

Spread the love

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಈಗ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಧರ್ಮಶಾಲಾದಲ್ಲಿ ಬಿಜೆಪಿಯ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಅಧಿವೇಶನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೇ 12 ರಿಂದ 15 ರವರೆಗೆ ನಡೆಯಲಿರುವ ಅಧಿವೇಶನದಲ್ಲಿ ರಾಹುಲ್ ದ್ರಾವಿಡ್ ಬಿಜೆಪಿಗೂ ಸೇರಬಹುದು ಎಂಬ ನಿರೀಕ್ಷೆ ಇದೆ,ಎಂದು ಬಗ್ಗೆ ಬಿಜೆಪಿ ಧರ್ಮಶಾಲಾ ಶಾಸಕ ವಿಶಾಲ್ ನೆಹ್ರಿಯಾ ಮಾಹಿತಿ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಇತರ ಪದಾಧಿಕಾರಿಗಳು ಮತ್ತು ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

ಮೇ 12ರಿಂದ 15ರವರೆಗೆ ಧರ್ಮಶಾಲಾದಲ್ಲಿ ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯಲಿದೆ.ಬಿಜೆಪಿಯ ರಾಷ್ಟ್ರೀಯ ನಾಯಕರು ಮತ್ತು ಹಿಮಾಚಲ ಪ್ರದೇಶದ ನಾಯಕರು ಭಾಗಿಯಾಗಲಿದ್ದಾರೆ.

ಇದನ್ನು ಓದಿ : JDS ಅಧಿಕಾರಕ್ಕೆ ತಂದೇ ಕೊನೆ ಉಸಿರು ಬಿಡುವೆ – ಇದು ನನ್ನ ಹಠ: ದೇವೇಗೌಡ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನೆ ಸಚಿವರು, ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ ಎಂದು ನೆಹ್ರಿಯಾ ಹೇಳಿದರು. ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರು ಮೂರು ದಿನಗಳ ಕಾಲವೂ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ , ದೇಶಾದ್ಯಂತದ 139 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಇದನ್ನು ಓದಿ : IAS ಮಹಿಳಾ ಅಧಿಕಾರಿಯ CA ಮನೆಯಲ್ಲಿ 18 ಕೋಟಿ ರು ವಶಕ್ಕೆ ಪಡೆದ ED

ನೆಹ್ರಿಯಾ ಪ್ರಕಾರ, ದ್ರಾವಿಡ್ ಉಪಸ್ಥಿತಿಯು ಯುವಕರಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಂದೇಶವನ್ನು ನೀಡುತ್ತದೆ. ಅವರ ಯಶಸ್ಸಿನಿಂದ ನಾವು ರಾಜಕೀಯದಲ್ಲಿ ಮಾತ್ರವಲ್ಲದೆ ಇತರ ಕ್ಷೇತ್ರಗಳಲ್ಲಿಯೂ ಮುಂದುವರಿಯಬಹುದು ಎಂಬ ಸಂದೇಶವನ್ನು ಯುವಕರಲ್ಲಿ ನೀಡಲಾಗುವುದು” ಎಂದು ಅವರು ಹೇಳಿದರು. ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಮತದಾನ ನಡೆಯುತ್ತಿರುವ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿದೆ.

error: Content is protected !!