ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥ ರಾಹುಲ್ ದ್ರಾವಿಡ್ ಜುಲೈಯಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡ ಆಡಲಿರುವ ಏಕದಿನ ಹಾಗೂ ಟಿ20 ಸರಣಿ ಪಂದ್ಯಗಳ ಕೋಚ್ ಆಗಿ ನೇಮಕ ಮಾಡಲಾಗಿದೆ.
2014ರಲ್ಲಿ ಇಂಗ್ಲೆಂಡ್ ವಿರುದ್ಧ ಸರಣಿಯಲ್ಲಿ ರಾಹುಲ್ ದ್ರಾವಿಡ್ ಬ್ಯಾಟಿಂಗ್ ಸಲಹೆಗಾರನಾಗಿ ಕೆಲಸ ಮಾಡಿದ್ದರು.
ಶ್ರೀಲಂಕಾ ಸರಣಿಗೆ ಭಾರತ ತಂಡವನ್ನು ಈ ತಿಂಗಳಾಂತ್ಯಕ್ಕೆ ಆಯ್ಕೆ ಮಾಡುವ ಸಾಧ್ಯತೆ ಇದೆ. ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನು ಆಡುವ ಮುನ್ನ ಆಟಗಾರರು ಶ್ರೀಲಂಕಾದಲ್ಲಿ ಕ್ವಾರಂಟೈನ್ ಗೆ ಒಳಗಾಗಬೇಕಾಗುತ್ತದೆ.
ಮೂರು ಏಕದಿನ ಪಂದ್ಯಗಳು ಜುಲೈ 13, 16 ಮತ್ತು 19 ರಂದು ಹಾಗೂ ಟಿ20 ಜುಲೈ 22 ರಿಂದ 27ರವರೆಗೆ ನಡೆಯುವ ಸಾಧ್ಯತೆಯಿದೆ.
ಈ ಸಮಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತದ ತಂಡ ಇಂಗ್ಲೆಂಡ್ ವಿರುದ್ಧ ಆಗಸ್ಟ್ 4 ರಂದು ಆರಂಭವಾಗುವ 5 ಟೆಸ್ಟ್ ಸರಣಿಗಳನ್ನು ಆಡಲು ತಯಾರು ನಡೆಸುತ್ತಿರುತ್ತದೆ.
ಅದಕ್ಕೂ ಮುನ್ನ ನ್ಯೂಜಿಲ್ಯಾಂಡ್ ವಿರುದ್ಧ ವಿಶ್ವ ಟೆಸ್ಟ್ ಚ್ಯಾಂಪಿಯನ್ ಷಿಪ್ ಗೆ ಸೌತಂಪ್ಟನ್ ನಲ್ಲಿ ಜೂನ್ 18 ರಿಂದ 22ರವರೆಗೆ ಆಡಲಿದೆ.
- ಸಾಮಾನ್ಯ ಉದ್ಯೋಗಿಯ ಕಥೆ ಏನು? ನಮಿತಾ ಥಾಪರ್
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
More Stories
ಸಾಮಾನ್ಯ ಉದ್ಯೋಗಿಯ ಕಥೆ ಏನು? ನಮಿತಾ ಥಾಪರ್
ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ