February 19, 2026

Newsnap Kannada

The World at your finger tips!

rahul gandi and HDK

ರಾಹುಲ್ ಗಾಂಧಿ ರಾಜ್ಯಕ್ಕೆ ಬರುವುದರಿಂದ ಯಾವುದೇ ಪರಿಣಾಮವಿಲ್ಲ : HDK

Spread the love

ಮಂಡ್ಯ : ಇಂದು ರಾಜ್ಯಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಳಿದ್ದು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯ ವಿವಿ ಆವರಣದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದೆ.

ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ,ರಾಹುಲ್ ಗಾಂಧಿ ಆಗಮನದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದು, ರಾಜ್ಯಕ್ಕೆ ರಾಹುಲ್ ಗಾಂಧಿ ಬರುವುದರಿಂದ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಂಡ್ಯದಲ್ಲಿ ಮಾತನಾಡಿದ HDK ,ರಾಜ್ಯಕ್ಕೆ ರಾಹುಲ್ ಗಾಂಧಿ ಬರುವುದರಿಂದ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ. ಮಂಡ್ಯದಲ್ಲಿ ರಾಹುಲ್ ಗಾಂಧಿ ಅರ್ಧ ಗಂಟೆ ಭಾಷಣ ಮಾಡಿದರೆ ಏನು ಆಗಲ್ಲ. ಮಂಡ್ಯ ಜನತೆ ಮೈತ್ರಿ ಪಕ್ಷದ ಅಭ್ಯರ್ಥಿ ಗೆಲ್ಲಿಸಲು ನಿರ್ಧರಿಸಿದ್ದಾರೆ.ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ

ರಾಹುಲ್ ಗಾಂಧಿ ಬಂದು ಹೋಗುವುದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ತಿಳಿಸಿದ್ದಾರೆ.

error: Content is protected !!