ಆ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ರಾಹುಲ್ ಗಾಂಧಿ ಚಾಲನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Team Newsnap
1 Min Read

ಬೆಂಗಳೂರು: ಸರ್ಕಾರದನಿರೀಕ್ಷಿತ ಯೋಜನೆ ‘ಗೃಹಲಕ್ಷ್ಮಿ’ ಗರ ಆಗಸ್ಟ್ 30 ರಂದು ಮೈಸೂರಿನಲ್ಲಿ ಚಾಲನೆ ದೊರೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದ ವೃಕ್ಷ ಸಾಂಪ್ರದಾಯಿಕ ಕಲ್ಯಾಣ ಮಂಟಪದಲ್ಲಿ ನಡೆದ ‘ನಮ್ಮೂರ ನಾಗಪಂಚಮಿ-2022’ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವೆ ಚಾಮುಂಡೇಶ್ವರಿ ತಾಯಿಯ ಕ್ಷೇತ್ರದಲ್ಲಿ ಈ ಯೋಜನೆಗೆ ಚಾಲನೆ ಸಿಗುತ್ತಿರುವುದು ನನ್ನ ಅದೃಷ್ಟ ಎಂದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದರು.

ಕಾರ್ಯಕ್ರಮ ಸಿದ್ಧತೆ ಕುರಿತು ವೀಕ್ಷಿಸಲು ಇಂದು ಮೈಸೂರಿಗೆ ಹೋಗುತ್ತಿದ್ದೇನೆ ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಯ ಸಚಿವರು, ಶಾಸಕರೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದರು.ಆಪರೇಷನ್ ಹಸ್ತ ; ಬಿಜೆಪಿ ಫುಲ್ ಅಲರ್ಟ್ – ಶಾಸಕರ ಮುನಿಸು ಶಮನಕ್ಕೆ ಬಿಜೆಪಿ ಪ್ರಯತ್ನ

ರಾಹುಲ್ ಗಾಂಧಿ ಅವರ ದಿನಾಂಕ ಹೊಂದಾಣಿಕೆ ದೃಷ್ಟಿಯಿಂದ ಮೈಸೂರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿ ಕಾರ್ಯಕ್ರಮವನ್ನು ಮೈಸೂರಿನಲ್ಲಿ ನಿಗದಿ ಪಡಿಸಲಾಗಿದೆ ಎಂದು ಸಚಿವರು ಹೇಳಿದರು.

Share This Article
Leave a comment