ಉತ್ತರ ಪ್ರದೇಶದಲ್ಲಿನ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಯವರ ಬಂಧನ ಖಂಡಿಸಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ರಾಹುಲ್ ಮತ್ತು ಪ್ರಿಯಾಂಕ ಬಂಧನಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಉತ್ತರ ಪ್ರದೇಶದಲ್ಲಿ ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಬಾಲಕಿಯ ಕುಟುಂಬಸ್ಥರನ್ನು ಸಂತೈಸಲು ಹೋಗುವಾಗ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರನ್ನು ಉತ್ತರ ಪ್ರದೇಶದ ಪೋಲೀಸರ ಕ್ರಮ ಖಂಡನೀಯ’ ಎಂದಿದ್ದಾರೆ.
‘ಪೋಲೀಸರ ಈ ವರ್ತನೆ ಅಮಾನವೀಯವಾಗಿದ್ದು, ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ಇದಾಗಿದೆ. ವಿಶ್ವದ ದೊಡ್ಡ ಪ್ರಜಾಪ್ರಭುತ್ವದ ದೇಶದಲ್ಲಿ ಈ ರೀತಿಯ ಕೃತ್ಯ ಮಾಡಿದ್ದಾರೆಂದ ಮೇಲೆ ಸಂತ್ರಸ್ತೆಯ ಕುಟುಂಬದವರನ್ನು ಬಿಟ್ಟು ಬಾಲಕಿಯ ಶವ ಸಂಸ್ಕಾರ ಮಾಡಿರುವುದು ಉತ್ಪ್ರೇಕ್ಷೆಯೇನಲ್ಲ. ಅಲ್ಲಿನ ಅಧಿಕಾರಿಗಳ, ರಾಜಕಾರಣಿಗಳ ನಿರ್ದೇಶನವಿಲ್ಲದೇ ಇಂತಹ ಘಟನೆಗಳುನಡೆಯಲು ಸಾಧ್ಯವಿಲ್ಲ’ ಎಂದು ಪರೋಕ್ಷವಾಗಿ ಯೋಗಿ ಆದಿತ್ಯನಾಥ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ.
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು