February 19, 2026

Newsnap Kannada

The World at your finger tips!

medical , camp , children

ರಾಜ್ಯಾದ್ಯಂತ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಆರೋಗ್ಯಾಧಿಕಾರಿಗಳ ದಾಳಿ: 156 ನಕಲಿ ವೈದ್ಯರು ಪತ್ತೆ

Spread the love

ಬೆಂಗಳೂರು : ರಾಜ್ಯದ್ಯಂತ ಬೆಚ್ಚಿಬಿಳಿಸುವಂತಹ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ವೈದ್ಯಕೀಯ ಕೇಂದ್ರಗಳ ಮೇಲೆ ದಾಳಿ ನಡೆಸಿ, ಬೀಗ ಹಾಕಿ ನೋಟಿಸ್ ಜಾರಿ ಮಾಡಲಾಗಿತ್ತು .

ರಾಜ್ಯಾದ್ಯಂತ ದಾಳಿ ನಡೆಸಿದ ವೇಳೆ ಮತ್ತೊಂದು ಭಯಾನಕ ವಿಷಯ ಹೊರ ಬಿದ್ದಿದ್ದು , ಆರೋಗ್ಯ ಇಲಾಖೆ ಅಧಿಕಾರಿಗಳು ಬರೋಬ್ಬರಿ 34 ಸ್ಕ್ಯಾನಿಂಗ್ ಕೇಂದ್ರಗಳನ್ನು ಸಿಸ್ ಮಾಡಿದ್ದಾರೆ ಮತ್ತು ಪರಿಶೀಲನೆಯ ವೇಳೆ 156 ನಕಲಿ ವೈದ್ಯರು ಪತ್ತೆಯಾಗಿದ್ದಾರೆ .

ಮೈಸೂರಿನಲ್ಲಿ ನಡೆದಂತಹ ಭ್ರೂಣ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಸ್ಕ್ಯಾನಿಂಗ್ ಸೆಂಟರ್ ಗಳ ಕಳ್ಳಾಟ ಹೊರ ಹಾಕಲು ಇಲಾಖೆ ಮುಂದಾಗಿತ್ತು.ಡಿಸೆಂಬರ್ 31ರ ಒಳಗೆ ರಾಜ್ಯದ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದರು.

ಈಗಾಗಲೇ ಎಲ್ಲ ಸ್ಕ್ಯಾನಿಂಗ್ ಸೆಂಟರ್ ಮೇಲ್ ದಾಳಿ ಪರಿಶೀಲನೆ ನಡೆಸಿ ಅಧಿಕಾರಿಗಳು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದ್ದಾರೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ಇದಲ್ಲದೆ ಅಧಿಕಾರಿಗಳ ಪರಿಶೀಲನೆ ವೇಳೆ 156 ನಕಲಿ ವೈದ್ಯರು ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

error: Content is protected !!