ಡಿಸೆಂಬರ್ 5 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

Team Newsnap
1 Min Read

ಬೆಂಗಳೂರು : ರಾಜಧಾನಿ ಸೇರಿದಂತೆ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ .

ಎಚ್​ಎಎಲ್​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ , 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ , ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ , 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ಮತ್ತು ಕೆಐಎಎಲ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ .

ಹವಾಮಾನ ಇಲಾಖೆ ಪ್ರಕಾರ, ಮುಂದಿನ ಎರಡು ದಿನಗಳ ಕಾಲ ದೆಹಲಿಯಲ್ಲಿ ತುಂತುರು ಮಳೆ ಮುಂದುವರಿಯುತ್ತದೆ. ಮಳೆಯಿಂದಾಗಿ ರಾಜಧಾನಿಯ ತಾಪಮಾನ 4 ಡಿಗ್ರಿಗಳಷ್ಟು ಕುಸಿದಿದೆ.

ಭಾರತ ಹವಾಮಾನ ಇಲಾಖೆ (IMD) ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪೂರ್ವ ಮತ್ತು ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಮಧ್ಯ ಮಹಾರಾಷ್ಟ್ರ, ಮರಾಠವಾಡ ಸೇರಿದಂತೆ ದೇಶದಾದ್ಯಂತ ಹಲವು ಭಾಗಗಳಲ್ಲಿ ಮಳೆಯ ಎಚ್ಚರಿಕೆಯನ್ನು ನೀಡಿದೆ.ಸಿಲ್ವರ್ ಪಿಕಾಕ್ ಪ್ರಶಸ್ತಿ: ಕನ್ನಡ ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿಸಿದ ಕಾಂತಾರ

ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ ,ಬೆಂಗಳೂರು ನಗರ, ಕೋಲಾರ , ತುಮಕೂರು, ಹಾಸನ, ಕೊಡಗು ,ಉಡುಪಿ ,ದಕ್ಷಿಣ ಕನ್ನಡ , ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ , ರಾಯಚೂರು, ಯಾದಗಿರಿ , ಚಿಕ್ಕಮಗಳೂರು , ವಿಜಯನಗರ ,ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಲಿದೆ.

Share This Article
Leave a comment