ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೋಮವಾರ ಬೆಂಗಳೂರು ನಗರ ಸೇರಿ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಕೆಲವು ಕಡೆಗಳಲ್ಲಿ ಸಾಧಾರಣ ಪ್ರಮಾಣದ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯ ಕೆಲ ಭಾಗಗಳಲ್ಲಿ ಡಿ.24ರಿಂದ ಡಿ.28ರವರೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಮಳೆಯ ಪ್ರಭಾವ ಇರುವ ಪ್ರಮುಖ ಜಿಲ್ಲೆಗಳು:
- ಡಿ.27 ಮತ್ತು ಡಿ.28: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಬಿರುಸಾಗಿ ಮಳೆಯಾಗುವ ಸಾಧ್ಯತೆ ಇದೆ.
- ಡಿ.24ರಿಂದ ಡಿ.26: ದಕ್ಷಿಣ ಕನ್ನಡ ಪ್ರದೇಶದ ಕೆಲ ಜಿಲ್ಲೆಗಳಲ್ಲಿ ಹಗುರದಿಂದ ಸಹಜ ಮಳೆಯಾಗುವ ಸಾಧ್ಯತೆ ಇದೆ.
- ಉತ್ತರ ಕರ್ನಾಟಕ: ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಡಿ.27ರಂದು ಜೋರಾಗಿ ಮಳೆಯಾಗಲಿದೆ. ಡಿ.24ರಿಂದ ಡಿ.26ರವರೆಗೆ ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ಇದನ್ನು ಓದಿ -10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹವಾಮಾನ ಇಲಾಖೆ ಈ ಮುನ್ಸೂಚನೆ ನೀಡಿರುವುದರಿಂದ ಜನರು ಎಚ್ಚರಿಕೆಯಿಂದಿರಲು ಹಾಗೂ ತೊಂದರೆಗಳಿಗೆ ಸಿದ್ಧರಾಗಿರಲು ಸೂಚಿಸಿದೆ.
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ