ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪರಿಣಾಮವಾಗಿ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಕೋಲಾರ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ದಾವಣಗೆರೆ, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಇದೀಗ ರಾಜ್ಯದಲ್ಲಿ ಚಳಿ ಪ್ರಮಾಣ ಹಿಗ್ಗಿ ಕಡಿಮೆಯಾಗುತ್ತಿದ್ದು, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚಳಿ ಮುಂದುವರಿಯಲಿದೆ.ಇದನ್ನು ಓದಿ -ಜೆಟ್ ವಿಮಾನ ಪತನ: 6 ಮಂದಿ ಸಾವು, ಹಲವಾರು ಮನೆಗಳಿಗೆ ಬೆಂಕಿ
ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣ ಮುಂದುವರಿಯಲಿದ್ದು, ತಂಪಾದ ಹವಾಮಾನ ಸಾಧಾರಣವಾಗಿ ಇರಲಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು