ಬೆಂಗಳೂರು : ರಾಜ್ಯದ ಜನತೆಗೆ ರಣಬಿಸಿಲ ಬೇಗೆಯಿಂದ ಸಮಾಧಾನಕರ ಸುದ್ದಿ .ಇಂದಿನಿಂದ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದಾದ್ಯಂತ ಏಪ್ರಿಲ್ 12 ರಿಂದ ಏ 14 ರವರೆಗೆ ಮತ್ತು 17 ಮತ್ತು 18 ರಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ನಾಳೆಯಿಂದ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದ್ದು ,ಏ.12,15,16 ರಂದು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ.ಮಂಡ್ಯದಲ್ಲಿ ಏ.16ರಿಂದ ಹೆಚ್‌ಡಿಕೆ ಪ್ರಚಾರ ಆರಂಭ
ಕೊಡಗು, ಮೈಸೂರು ,ಮಂಡ್ಯ ,ಹಾಸನ ,ಚಿಕ್ಕಮಗಳೂರು ,ಬೀದರ್, ಕಲಬುರ್ಗಿ, ವಿಜಯಪುರ, ಕೊಪ್ಪಳ, ರಾಯಚೂರು, ವಿಜಯಪುರ, ಗದಗ, ಬಳ್ಳಾರಿ, ಚಿತ್ರದುರ್ಗ, ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
More Stories
ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ
ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಚುನಾವಣೆಯ ಮೂಲಕ ತೀರ್ಮಾನ