ಕರ್ನಾಟಕದ ಕರಾವಳಿ ಸೇರಿದಂತೆ 6 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ
ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡದಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರಿನಲ್ಲಿ ಮುಂದಿನ 24 ಗಂಟೆಯೊಳಗಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ದಕ್ಷಿಣ ಒಳನಾಡಿನಲ್ಲಿ ಮಳೆ
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿಯೂ ಒಣಹವೆ ಮುಂದುವರೆಯಲಿದೆ. ಆದರೆ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಾತ್ರ ಮಳೆಯಾಗಲಿದೆ.
ಬೆಂಗಳೂರು ಹವಾಮಾನ ಹೇಗಿದೆ?
ಬೆಂಗಳೂರಿನಲ್ಲಿ ಶುಭ್ರ ಆಕಾಶವಿದೆ ಬೆಂಗಳೂರು ನಗರದಲ್ಲಿ ಗರಿಷ್ಠ 33.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್‌ಎಎಲ್‌ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 33.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಅತಿ ಹೆಚ್ಚು, ಅತಿ ಕಡಿಮೆ ಉಷ್ಣಾಂಶ ಎಲ್ಲಿ?
ಕಲಬುರಗಿಯಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ದಾವಣಗೆರೆಯಲ್ಲಿ 14.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ