February 19, 2026

Newsnap Kannada

The World at your finger tips!

raghavendra rajkumar son

ಚಿತ್ರರಂಗಕ್ಕೆ ರಾಜ್ ಕುಟುಂಬದ ಕುಡಿ ಎಂಟ್ರಿ

Spread the love

ಕನ್ನಡ ಚಿತ್ರರಂಗದ ದೊಡ್ಮನೆಯ ಮೂರನೇ ತಲೆಮಾರಿನ ಎರಡನೇ ಕುಡಿಯಾದ ಯುವ ರಾಜ್‌ಕುಮಾರ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಇನ್ನೂ ಹೆಸರಿಡದ ಪುನೀತ್ ರುದ್ರನಾಗ್ ಅವರ ನಿರ್ದೇಶನದ ಚಿತ್ರದಲ್ಲಿ ಯುವ ರಾಜ್‌ಕುಮಾರ್ ನಟಿಸುತ್ತಿದ್ದಾರೆ.

ಯುವ ರಾಜ್‌ಕುಮಾರ್ ರಾಘವೇಂದ್ರ ರಾಜ್‌ಕುಮಾರ್ ರ ಎರಡನೇ ಮಗ.‌ ಡಾ. ರಾಜ್‌ಕುಮಾರ್ ಅವರು ಭಾರತೀಯ ಚಿತ್ರರಂಗ ಕಂಡ ಮೇರು ಹಾಗೂ ಪ್ರಮುಖ ನಟರು. ಅವರ ನಂತರ ಅವರ ಮಕ್ಕಳಾದ ಶಿವ ರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಪುನೀತ್ ರಾಜ್‍ಕುಮಾರ್ ‌ಚಿತ್ರರಂಗಕ್ಕೆ ತಮ್ಮದೇ ಆದ ಸೇವೆ ನೀಡುತ್ತಾ ಬರುತ್ತಾಲಿದ್ದಾರೆ. ಈಗ ದೊಡ್ಮನೆಯ ಮೂರನೇ ತಲೆಮಾರಿನ ಮೊದಲನೇಯ ಕುಡಿ, ವಿನಯ್ ರಾಘವೇಂದ್ರ ರಾಜ್‌ಕುಮಾರ್ ಉತ್ತಮ ನಟನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಯುವ ರಾಜ್‌ಕುಮಾರ್ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ.

ಇನ್ನೂ ಹೆಸರಿಡದ ಚಿತ್ರಕ್ಕೆ ಉಗ್ರಂ, ಕೆಜಿಎಫ್ ಖ್ಯಾತಿಯ ಸಂಗೀತ ನಿರ್ದೇಶಕ ರವಿ ಬಸ್ರೂರು ಈ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ.

error: Content is protected !!