ಅಶ್ಲೀಲ ನೀಲಿ ಸಿನಿಮಾ ತಯಾರಿಕೆ ಆರೋಪದಲ್ಲಿ ಜೈಲು ಪಾಲಾಗಿರುವ ನಟಿ ಶಿಲ್ಪಾ ಶೆಟ್ಟಿ ಪತಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಜಾಮೀನು ಅರ್ಜಿಯನ್ನು ಮುಂಬೈ ನ್ಯಾಯಾಲಯ ತಳ್ಳಿ ಹಾಕಿದೆ.
ರಾಜ್ ಕುಂದ್ರಾ ಪ್ರಕರಣ ವಿಚಾರಣೆ ಹಂತದಲ್ಲಿದೆ. ಪ್ರಕರಣದ ಸಂತ್ರಸ್ಥರಿಂದ ಹೇಳಿಕೆ ಪಡೆಯಬೇಕಿದೆ. ಈ ಹಂತದಲ್ಲಿ ರಾಜ್ ಕುಂದ್ರಾಗೆ ಜಾಮೀನು ನೀಡುವುದು ಸೂಕ್ತವಲ್ಲ ಎಂದು ಮುಂಬೈ ಸಿಸಿಬಿ ಪೊಲೀಸರ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು.
ರಾಜ್ ಕುಂದ್ರಾ ಪರ ವಾದ ಮಂಡಿಸಿದ ವಕೀಲರು, ರಾಜ್ ಕುಂದ್ರಾ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಅಲ್ಲದೇ ರಾಜ್ ಕುಂದ್ರಾ ಮುಂಬೈನಲ್ಲೇ ಕುಟುಂಬದ ಜೊತೆ ವಾಸವಾಗಿದ್ದಾರೆ. ಹೀಗಾಗಿ ತನಿಖೆಗೆ ಅಸಹಕಾರ ನೀಡುವ ಪ್ರಶ್ನೆಯೇ ಇಲ್ಲ. ಹೀಗಾಗಿ ವಿನಾಕಾರಣ ಅವರನ್ನು ಜೈಲಿನಲ್ಲಿಡುವ ಬದಲು ಜಾಮೀನು ನೀಡಬೇಕೆಂದು ಮನವಿ ಮಾಡಿದ್ದರು.
ಮುಂಬೈ ಪೊಲೀಸರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ, ರಾಜ್ ಕುಂದ್ರಾ ಬ್ರಿಟನ್ ನ ಪೌರತ್ವ ಹೊಂದಿದ್ದಾರೆ. ಅಲ್ಲದೇ ಪಾಸ್ ಪೋರ್ಟ್ ಗಳು ಬಳಿಯೇ ಇದೆ. ಹೀಗಾಗಿ ಜಾಮೀನು ನೀಡುವುದು ಸೂಕ್ತವಲ್ಲ ಎಂದು ಆಕ್ಷೇಪ ಸಲ್ಲಿಸಿದರು.
ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯ ರಾಜ್ ಕುಂದ್ರಾ ಜಾಮೀನು ಅರ್ಜಿ ವಜಾಗೊಳಿಸಿದೆ. ನಿನ್ನೆಯಷ್ಟೇ ರಾಜ್ ಕುಂದ್ರಾಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ನ್ಯಾಯಾಲಯದ ಈ ಆದೇಶದಿಂದ ರಾಜ್ ಕುಂದ್ರಾಗೆ ಜೈಲೇ ಗತಿಯಾಗಿದೆ.
ಕುಂದ್ರಾ ಪರ ವಕೀಲರು ಜಾಮೀನಿ ಗಾಗಿ ಹೈಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ