ರಾಜ್ ಕುಂದ್ರಾಗೆ ಜಾಮೀನು ನಿರಾಕರಣೆ : ಸಧ್ಯಕ್ಕೆ ಜೈಲೇ ಗತಿ

Newsnap Team
1 Min Read

ಅಶ್ಲೀಲ ನೀಲಿ ಸಿನಿಮಾ ತಯಾರಿಕೆ ಆರೋಪದಲ್ಲಿ ಜೈಲು ಪಾಲಾಗಿರುವ ನಟಿ ಶಿಲ್ಪಾ ಶೆಟ್ಟಿ ಪತಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಜಾಮೀನು ಅರ್ಜಿಯನ್ನು ಮುಂಬೈ ನ್ಯಾಯಾಲಯ ತಳ್ಳಿ ಹಾಕಿದೆ.

ರಾಜ್ ಕುಂದ್ರಾ ಪ್ರಕರಣ ವಿಚಾರಣೆ ಹಂತದಲ್ಲಿದೆ. ಪ್ರಕರಣದ ಸಂತ್ರಸ್ಥರಿಂದ ಹೇಳಿಕೆ ಪಡೆಯಬೇಕಿದೆ. ಈ ಹಂತದಲ್ಲಿ ರಾಜ್ ಕುಂದ್ರಾಗೆ ಜಾಮೀನು ನೀಡುವುದು ಸೂಕ್ತವಲ್ಲ ಎಂದು ಮುಂಬೈ ಸಿಸಿಬಿ ಪೊಲೀಸರ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು.

ರಾಜ್ ಕುಂದ್ರಾ ಪರ ವಾದ ಮಂಡಿಸಿದ ವಕೀಲರು, ರಾಜ್ ಕುಂದ್ರಾ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಅಲ್ಲದೇ ರಾಜ್ ಕುಂದ್ರಾ ಮುಂಬೈನಲ್ಲೇ ಕುಟುಂಬದ ಜೊತೆ ವಾಸವಾಗಿದ್ದಾರೆ. ಹೀಗಾಗಿ ತನಿಖೆಗೆ ಅಸಹಕಾರ ನೀಡುವ ಪ್ರಶ್ನೆಯೇ ಇಲ್ಲ. ಹೀಗಾಗಿ ವಿನಾಕಾರಣ ಅವರನ್ನು ಜೈಲಿನಲ್ಲಿಡುವ ಬದಲು ಜಾಮೀನು ನೀಡಬೇಕೆಂದು ಮನವಿ ಮಾಡಿದ್ದರು.

ಮುಂಬೈ ಪೊಲೀಸರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ, ರಾಜ್ ಕುಂದ್ರಾ ಬ್ರಿಟನ್ ನ ಪೌರತ್ವ ಹೊಂದಿದ್ದಾರೆ. ಅಲ್ಲದೇ ಪಾಸ್ ಪೋರ್ಟ್ ಗಳು ಬಳಿಯೇ ಇದೆ. ಹೀಗಾಗಿ ಜಾಮೀನು ನೀಡುವುದು ಸೂಕ್ತವಲ್ಲ ಎಂದು ಆಕ್ಷೇಪ ಸಲ್ಲಿಸಿದರು.

ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯ ರಾಜ್ ಕುಂದ್ರಾ ಜಾಮೀನು ಅರ್ಜಿ ವಜಾಗೊಳಿಸಿದೆ. ನಿನ್ನೆಯಷ್ಟೇ ರಾಜ್ ಕುಂದ್ರಾಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ನ್ಯಾಯಾಲಯದ ಈ ಆದೇಶದಿಂದ ರಾಜ್ ಕುಂದ್ರಾಗೆ ಜೈಲೇ ಗತಿಯಾಗಿದೆ.‌

ಕುಂದ್ರಾ ಪರ ವಕೀಲರು ಜಾಮೀನಿ ಗಾಗಿ ಹೈಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ.‌

Share This Article
Leave a comment