ಶ್ರೀರಂಗಪಟ್ಟಣ ದಸರಾ ಜಂಬೂ ಸವಾರಿಗೆ ಚಾಲನೆ ನೀಡಿದ ರಾಜಮಾತೆ

Team Newsnap
1 Min Read

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣ ದಸರಾ ಉತ್ಸವಕ್ಕೆ ರಾಜಾ ವಂಶಸ್ಥೆ, ರಾಜ ಮಾತೆ ಪ್ರಮೋದ ದೇವಿ ಒಡೆಯರ್ ರವರು ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿ ಅಗ್ರ ಪೂಜೆ ಸಲ್ಲಿಸಿ ಸೋಮವಾರ ಚಾಲನೆ ನೀಡಿದರು.

ಪೂಜೆ ಸಲ್ಲಿಸುವ ಸಂದರ್ಭದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ, ಶಾಸಕರಾದ ಎ.ಬಿ ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಕ್ ತನ್ವೀರ್ ಆಸಿಫ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಮೆರವಣಿಗೆಯಲ್ಲಿ ತಾಯಿ ಚಾಮುಂಡೇಶ್ವರಿ ಅಂಬಾರಿ ಹೊತ್ತು ಮಹೇಂದ್ರ ಮುಂದೆ ಸಾಗಿತು. ವರಲಕ್ಷ್ಮೀ ಹಾಗೂ ವಿಜಯ ಜೊತೆಗೆ ಹೆಜ್ಜೆ ಹಾಕಿತು.

ಮೆರವಣಿಗೆಯಲ್ಲಿ ಪೊಲೀಸ್ ಬ್ಯಾಂಡ್, ಅಶ್ವದಳ, ಪೂಜಾ ಕುಣಿತ, ವೀರಗಾಸೆ, ನಗಾರಿ, ಜಡೆ ಕೋಲಾಟ, ಗಾರುಡಿ ಗೊಂಬೆ, ತಮಟೆ, ಕಂಸಾಳೆ, ಡೊಳ್ಳು ಕುಣಿತ, ಸೋಮನ ಕುಣಿತ, ಒನಕೆ ಕುಣಿತ, ರಂಗದ ಕುಣಿತ, ಕೋಳಿ ನೃತ್ಯ, ಕಹಳೆ, ನಾಸಿಕ್ ಡೋಲ್, ದೊಡ್ಡ ಆಂಜನೇಯ, ಪಟ್ಟದ ಕುಣಿತ, ಯಕ್ಷಗಾನ ನೃತ್ಯ, ಹುಲಿವೇಷ, ಹಾಲಕ್ಕಿ ಸುಗ್ಗಿ ಕುಣಿತ, ಕೇರಳ ಚಂಡೆ, ಜಗ್ಗಲಿಗೆ, ಮಹಿಳಾ ಡೊಳ್ಳು ಕುಣಿತ ಕಲಾ ತಂಡಗಳು ಭಾಗವಹಿಸಿ ವಿಶೇಷ ಮೆರಗು ನೀಡಿತು.ಹೈಕಮಾಂಡ್ ನಯಾಪೈಸೆ ಕೇಳಿಲ್ಲ

ಸ್ಥಬ್ದ ಚಿತ್ರಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗೃಹಲಕ್ಷಿ ಯೋಜನೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಸ್ಥಬ್ದ ಚಿತ್ರ, ಅರೋಗ್ಯ ಇಲಾಖೆ ವತಿಯಿಂದ ಹೃದಯಘಾತ ತ್ವರಿತ ಚಿಕಿತ್ಸೆಗೆ ಸ್ಟೆಮಿ ಯೋಜನೆ ಕುರಿತು ಸ್ಥಬ್ದ ಚಿತ್ರ, ರೇಷ್ಮೆ ಇಲಾಖೆ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ವತಿಯಿಂದ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡುವ ಸ್ಥಬ್ದ ಚಿತ್ರ ಪ್ರದರ್ಶಿಸಲಾಯಿತು.

Share This Article
Leave a comment