Trending

ಕಳಚಿದ ಸಂಗೀತ ಲೋಕದ ಮತ್ತೊಂದು ಕೊಂಡಿ

1950ರ ದಶಕದಿಂದ 2000ರ ದಶಕದ ವರೆಗೂ ಸಂಗೀತ ಲೋಕದ ಮೆಲೋಡಿ ಕಿಂಗ್ ಜೋಡಿ ಎನಿಸಿಕೊಂಡಿದ್ದ ರಾಜನ್-ನಾಗೇಂದ್ರ ಜೋಡಿ ಖ್ಯಾತಿಯ ರಾಜನ್(87) ಬೆಂಗಳೂರಿನ‌ ತಮ್ಮ ಸ್ವ ಗೃಹದಲ್ಲಿ‌ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರ ಸಹೋದರ ನಾಗೇಂದ್ರ 2000 ದಲ್ಲೇ ನಿಧನರಾಗಿದ್ದಾರೆ.

ರಾಜನ್ ಅನೇಕ‌ ದಿನಗಳಿಂದ ವಯೋ ಸಹಜ ಖಾಯಿಲೆಗಳಿಂದ ಬಳಲುತ್ತಿದ್ದರು. ಮೈಸೂರಿನಲ್ಲಿ 1933ರಲ್ಲಿ ಜನಿಸಿದ ರಾಜನ್ ತಮ್ಮ ಸಹೋದರ ನಾಗೇಂದ್ರ ಅವರೊಡಗೂಡಿ 1952 ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.

1952 ರಿಂದ 1999ರ ವರೆಗೂ ಸುಮಾರು‌ 375 ಸಿನಿಮಾಗಳಿಗೆ ಈ ಜೋಡಿ‌ ಸಂಗೀತ ನಿರ್ದೇಶನ ನೀಡಿದೆ.

ಕನ್ನಡದ 200ಕ್ಕೂ ಅಧಿಕ ಸಿನಿಮಾಗಳ ಜೊತೆ, ತೆಲುಗು, ತಮಿಳು, ಹಿಂದಿ, ಮಲಯಾಳಂ, ಶ್ರೀಲಂಕಾದ ಸಿಂಹಳ ಭಾಷೆಯ ಸಿನಿಮಾಗಳಿಗೂ ಸಂಗೀತ ಸಂಯೋಜಿಸಿ ಕೊಟ್ಟಿದ್ದಾರೆ. ಇವರು ಸಂಯೋಜಿಸಿದ‌ ಸಂಗೀತವು ತೆಲುಗಿನಲ್ಲೂ ಸಹ ಟ್ರೆಂಡ್ ಸೆಟ್ ಮಾಡಿತ್ತು.

‘ಮಂತ್ರಾಲಯ ಮಹಾತ್ಮೆ’, ‘ಗಂಧದ ಗುಡಿ’, ‘ನಾ ನಿನ್ನ ಬಿಡಲಾರೆ’, ‘ಎರಡು ಕನಸು’, ‘ಕಳ್ಳ ಕುಳ್ಳ’, ‘ಬಯಲು ದಾರಿ’, ‘ನಾ ನಿನ್ನ ಮರೆಯಲಾರೆ’, ‘ಹೊಂಬಿಸಿಲು’, ‘ಆಟೋ ರಾಜ’, ‘ಗಾಳಿಮಾತು’, ‘ಚಲಿಸುವ ಮೋಡಗಳು’, ‘ಬೆಟ್ಟದ ಹೂವು’, ‘ಸುಪ್ರಭಾತ’, ‘ಮತ್ತೆ ಹಾಡಿತು ಕೋಗಿಲೆ’, ‘ಕರುಳಿನ ಕುಡಿ’, ‘ಪರಸಂಗದ ಗೆಂಡೆತಿಮ್ಮ’, ‘ಶ್ರೀನಿವಾಸ ಕಲ್ಯಾಣ’ ರಾಜನ್-ನಾಗೇಂದ್ರ ಜೋಡಿ‌ ಸಂಗೀತ ನೀಡಿದ ಕೆಲವು ಪ್ರಮುಖ ಚಿತ್ರಗಳು.

ರಾಜನ್ ಅಂತ್ಯಕ್ರಿಯೆಯನ್ನು ಇಂದು ಹೆಬ್ಬಾಳದ ಸ್ಮಶಾನದಲ್ಲಿ ನೆರವೇರಿಸಲಾಗುವುದು. ರಾಜನ್ ಅವರು ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಸಂಗೀತ ಲೋಕದ ದಿಗ್ಗಜನಿಗೆ ಚಿತ್ರರಂಗದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024