November 22, 2024

Newsnap Kannada

The World at your finger tips!

KUWJ , press , congratulations

Rajata Kamal for the achievement of news department: KUWJ congratulations ವಾರ್ತಾ ಇಲಾಖೆಯ ಸಾಧನೆಗೆ ರಜತ ಕಮಲ : KUWJ ಅಭಿನಂದನೆ

ವಾರ್ತಾ ಇಲಾಖೆಯ ಸಾಧನೆಗೆ ರಜತ ಕಮಲ : KUWJ ಅಭಿನಂದನೆ

Spread the love

ವಾರ್ತಾ ಇಲಾಖೆ ಸಿದ್ದಪಡಿಸಿದ್ದ ನಾದದ ನವನೀತ ಡಾ.ಪಂಡಿತ್ ವೆಂಕಟೇಶ್ ಕುಮಾರ್ ಸಾಕ್ಷ್ಯಚಿತ್ರಕ್ಕೆ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ರಜತ ಕಮಲ ಪ್ರಶಸ್ತಿ ಸಿಕ್ಕಿರುವುದಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಅಭಿನಂದಿಸಿದೆ.

ಖ್ಯಾತ ಹಿಂದೂಸ್ತಾನಿ ಗಾಯಕರಾಗಿದ್ದ ಧಾರವಾಡದ ಡಾ.ಪಂಡಿತ್ ವೆಂಕಟೇಶ್ ಅವರ ಬಗ್ಗೆ 2020ರಲ್ಲಿ ವಾರ್ತಾ ಇಲಾಖೆ ನಿರ್ಮಿಸಿದ್ದ ಸಾಕ್ಷ್ಯಚಿತ್ರವೊಂದು ಈ ಎತ್ತರದ ಸಾಧನೆಗೆ ಪಾತ್ರವಾಗಿರುವುದು ಹೆಮ್ಮೆಯ ಸಂಗತಿ ಎಂದು ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಪ್ರತಿಕ್ರಿಯಿಸಿದ್ದಾರೆ.ಇದನ್ನು ಓದಿ –ಮಹಿಳಾ ತಹಶೀಲ್ದಾರ್‌ಗೆ ಎಷ್ಟು ಮದುವೆ ಆಗಿದೆ?- RTI ಮಾಹಿತಿ ಕೇಳಿದ ಕಾರ್ಯಕರ್ತ ಜೈಲು ಪಾಲು

ಆಯುಕ್ತ ಡಾ.ಹರ್ಷ ಅವರ ನೇತೃತ್ವದ ಸಾಕ್ಷ್ಯ ಚಿತ್ರ ನಿರ್ಮಾಣ ತಂಡಕ್ಕೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಪತ್ರಕರ್ತರ ಹೆಲ್ತ್ ಕಾರ್ಡ್:

ಪತ್ರಕರ್ತರಿಗೆ ಉಚಿತ ಹೆಲ್ತ್ ಕಾರ್ಡ್ ವಿತರಣೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದಲ್ಲಿ ಸಭೆಗಳನ್ನು ಕರೆಯಲು ವಾರ್ತಾ ಇಲಾಖೆ ಉಪ ನಿರ್ದೇಶಕರಿಗೆ ನಿರ್ದೇಶನ ನೀಡುವುದಾಗಿ ವಾರ್ತಾ ಇಲಾಖೆ ಆಯುಕ್ತ ಡಾ.ಪಿ.ಎಸ್.ಹರ್ಷ ತಿಳಿಸಿದ್ದಾರೆ.

ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ನಿಯೋಗಕ್ಕೆ ಈ ಭರವಸೆ ನೀಡಿರುವ ಅವರು, ಹೊಸ ರೂಪದಲ್ಲಿ ಬರಲಿರುವ ಹೆಲ್ತ್ ಕಾರ್ಡ ಮಾನ್ಯತೆ ಪಡೆದ ಪತ್ರಿಕೆಯಲ್ಲಿ ಕೆಲಸ ಮಾಡುವ ಎಲ್ಲಾ ಪತ್ರಕರ್ತರಿಗೂ ಲಭ್ಯವಾಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಅಧ್ಯಕ್ಷರಾಗಿರುವ ಜಿಲ್ಲಾ ಮಟ್ಟದ ಆರೋಗ್ಯ ಸಮಿತಿ ಸಭೆಯಲ್ಲಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಸದಸ್ಯರು ಆಗಿರುವುದು ಸರ್ಕಾರದ ಆದೇಶವಾಗಿರುವ ಹಿನ್ನೆಲೆಯಲ್ಲಿ ಸಭೆಗೆ ಕರೆಯುವಂತೆ ಸುತ್ತೋಲೆ ಹೊರಡಿಸುವುದಾಗಿ ತಿಳಿಸಿದ್ದಾರೆ.

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಸೌಲಭ್ಯ ವಿಸ್ತರಿಸಲು ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡುವುದಾಗಿ ತಿಳಿಸಿದರು. ಹಿಂದೆ ಇದ್ದ ವ್ಯವಸ್ಥೆ ಜಾರಿ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ ಎಂದರು.ಡಿ.ಕೆ. ಶಿಗೆ ಮತ್ತೊಂದು ಶಾಕ್ ನೀಡಿದ ಇಡಿ : ಅ. 7 ರಂದು ವಿಚಾರಣೆಗೆ ಬನ್ನಿ

ಪ್ರಶಸ್ತಿ ನೀಡಲು ಕ್ರಮ:

ಕಳೆದ ಮೂರು ವರ್ಷಗಳಿಂದ ಬಾಕಿ ಇರುವ ಟಿಎಸ್ಆರ್ ಮತ್ತು ಮೊಹರೆ ಹಣಮಂತರಾವ್ ಅವರ ಹೆಸರಿನಲ್ಲಿ ಹಿರಿಯ ಪತ್ರಕರ್ತರಿಗೆ ಕೂಡ ಮಾಡುವ ಪ್ರಶಸ್ತಿಯನ್ನು‌ ಆದಷ್ಟು ಶೀಘ್ರವಾಗಿ ಪ್ರದಾನ ಮಾಡುವಂತೆ ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಒತ್ತಾಯಿಸಿದರು. ಈ ಬಗ್ಗೆ ಕೂಡಲೇ ಮುಖ್ಯಮಂತ್ರಿಗಳ ಜೊತೆಗೆ ಮಾತನಾಡಿ ಆದಷ್ಟು ಬೇಗ ದಿನಾಂಕ ನಿಗದಿ ಮಾಡುವುದಾಗಿ ಆಯುಕ್ತರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕೆಯುಡಬ್ಲ್ಯೂಜೆಯ ದಿನೇಶ್ ಗೌಡಗೆರೆ, ಹೆಂಜಾರಪ್ಪ, ಶರಣ ಬಸಪ್ಪ ಮತ್ತಿತರರು ಹಾಜರಿದ್ದರು.

Copyright © All rights reserved Newsnap | Newsever by AF themes.
error: Content is protected !!