January 7, 2025

Newsnap Kannada

The World at your finger tips!

chandravana

ಚಂದ್ರವನ ಆಶ್ರಮಕ್ಕೆ ರಾಜೇಂದ್ರ ಸಿಂಗ್ ಬಾಬು, ದೊಡ್ಡಣ್ಣ ಭೇಟಿ

Spread the love

ಶ್ರೀರಂಗಪಟ್ಟಣದ ಚಂದ್ರವನ ಆಶ್ರಯಕ್ಕೆ ನಿರ್ದೇಶಕ ಡಾ. ರಾಜೇಂದ್ರ ಸಿಂಗ್ ಬಾಬು, ಹಿರಿಯ ನಟ ದೊಡ್ಡಣ್ಣ ಭೇಟಿ ನೀಡಿ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿಗಳ ಆಶೀರ್ವಾದ ಪಡೆದರು.

CHANDRAVANA1

ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಚಂದ್ರವನ ಆಶ್ರಮಕ್ಕೆ ಭೇಟಿ ನೀಡಿದ ಅವರು, ಚಂದ್ರವನ ಆಶ್ರಮ ತುಂಬಾ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದ್ದಾರೆ. ಸುಂದರ ವಾತಾವರಣದಿಂದ ಕೂಡಿದೆ ಎಂದು ಹೇಳಿದರು.

ಹಿರಿಯ ನಟ ದೊಡ್ಡಣ್ಣ ಮಾತನಾಡಿ, ಕಾವೇರಿ ನದಿ ಪಕ್ಕದಲ್ಲೆ ಹರಿಯುತ್ತಿದ್ದು, ಇಲ್ಲಿಗೆ ಬಂದರೆ ಸಮಯ ಕಳೆಯುವುದೇ ತಿಳಿಯುವುದಿಲ್ಲ. ಆದ್ದರಿಂದ ಸಮಯ ಸಿಕ್ಕಾಗ ಚಂದ್ರವನ ಆಶ್ರಮಕ್ಕೆ ಬಿಡುವಿನ ವೇಳೆ ಬಂದು ಹೋಗುತ್ತೇವೆ ಎಂದರು.

ಚಂದ್ರವನ ಆಶ್ರಮ ಸಾಕಷ್ಟು ಪ್ರಸಿದ್ದಿ ಪಡೆದಿದ್ದು, ಸಿನಿಮಾ ನಟರು ಹಾಗೂ ರಾಜಕಾರಣಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಠಕ್ಕೆ ಆಗಮಿಸುತ್ತಿದ್ದಾರೆ. ಸುಂದರ ವಾತಾವರಣದಿಂದ ಕೂಡಿದ್ದು, ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎಂದರು.

Copyright © All rights reserved Newsnap | Newsever by AF themes.
error: Content is protected !!