February 20, 2026

Newsnap Kannada

The World at your finger tips!

thejasvi wife

ಸಾಹಿತಿ ಪೂರ್ಣ ಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ನಿಧನ

Spread the love

ರಾಷ್ಟ್ರಕವಿ ಕುವೆಂಪು ಸೊಸೆ, ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ಮಂಗಳವಾರ ಬೆಳಿಗ್ಗೆ ನಿಧನರಾದರು.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಜೇಶ್ವರಿ( 84) ಅವರು ಕೆಲವು ದಿನಗಳಿಂದ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು .

ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.

ಪತಿ ಪೂರ್ಣಚಂದ್ರ ತೇಜಸ್ವಿ ನಿಧನದ ಬಳಿಕ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಹ್ಯಾಂಡಪೋಸ್ಟ್ ತೋಟದ ಮನೆಯಲ್ಲಿ ರಾಜೇಶ್ವರಿ ಅವರು ವಾಸಿಸುತ್ತಿದ್ದರು.

error: Content is protected !!