ಅನಾರೋಗ್ಯ ಕಾರಣಕ್ಕಾಗಿ ರಜನಿಕಾಂತ್ ಹೊಸ ಪಕ್ಷ ಸ್ಥಾಪನೆ ಇಲ್ಲ

Team Newsnap
1 Min Read

ತಲೈವಾ, ಸೂಪರ್ ಸ್ಟಾರ್ ರಜಿನಿಕಾಂತ್ ತಮಿಳುನಾಡಿನಲ್ಲಿ ಹೊಸ ಪಕ್ಷ ಸ್ಥಾಪನೆ ಮಾಡುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಈ ನಿರ್ಧಾರದಿಂದಾಗಿ ಹೊಸ ಪಕ್ಷ ಹಾಗೂ ರಜನಿ ರಾಜಕಾರಣದ ಸ್ಟೈಲ್ ನೋಡ ಬಯಸಿದ ಅಭಿಮಾನಿಗಳಿಗೆ ಸಾಕಷ್ಟು ನಿರಾಸೆಯಾಗಿದೆ.

ಆರೋಗ್ಯ ಸಮಸ್ಯೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ನಾನು ರಾಜಕೀಯ ಪಕ್ಷವನ್ನು ಸ್ಥಾಪನೆ ಮಾಡುತ್ತಿಲ್ಲ ಎಂದು ರಜಿನಿಕಾಂತ್ ಹೇಳಿದ್ದಾರೆ.

ಈ ಬಗ್ಗೆ ಸ್ವತಃ ರಜಿನಿಕಾಂತ್ ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ. ಸುದೀರ್ಘ ಮೂರು ಪುಟದ ಪತ್ರವನ್ನು ಪ್ರಕಟಿಸಿದ್ದಾರೆ. ತಮ್ಮ ಈ ನಿರ್ಧಾರಕ್ಕೆ ಅನಾರೋಗ್ಯ ವೇ ಪ್ರಮುಖ ಕಾರಣವಾಗಿದೆ ಎಂದಿದ್ದಾರೆ.

ಕಳೆದ ಶುಕ್ರವಾರ (ಡಿ.25) ದಂದು ರಕ್ತದೊತ್ತಡ ಸಮಸ್ಯೆಗೆ ಸಿಲುಕಿದ್ದ ರಜಿನಿಕಾಂತ್ ಹೈದರಾಬಾದ್ ನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದು ಗುಣಮುಖರಾದ ನಂತರ ರಜಿನಿಕಾಂತ್ ಆಸ್ಪತ್ರೆಯಿಂದ ಬಿಡುಗಡೆ ಮನೆಗೆ ಹೋಗಿ ವಿಶ್ರಾಂತಿ ಪಡೆಯುವ ವೇಳೆಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ.ಈ ನಡುವೆ ಡಿಸೆಂಬರ್ 31 ಕ್ಕೆ ಹೊಸ ಪಕ್ಷ ಘೋ಼ಷಣೆ ಮಾಡುವುದಾಗಿಯೂ ಹೇಳಿದ್ದರು .

Share This Article
Leave a comment