July 7, 2022

Newsnap Kannada

The World at your finger tips!

election,BJP,Rajya Sabha

Rajya Sabha election: Nirmala Sitharaman nomination by BJP

ರಾಜ್ಯಸಭಾ ಚುನಾವಣೆ: ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಕೆ

Spread the love

ಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯ ನಾಲ್ಕು ಸ್ಥಾನಗಳಿಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್ ಇಂದು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವ ಮೊದಲು ನಿರ್ಮಲಾ ಸೀತಾರಾಮನ್ ಅವರು ಗವಿಗಂಗಾಧರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು,ನಂತರ ಅಲ್ಲಿಂದ ತೆರಳಿ ನಾಮಪತ್ರ ಸಲ್ಲಿಸಿದರು.

ಇದನ್ನು ಓದಿ –ಜಮ್ಮುವಿನಲ್ಲಿ ಶಾಲೆಗೆ ನುಗ್ಗಿ ಗುಂಡಿಟ್ಟು ಹೈಸ್ಕೂಲ್‌ ಶಿಕ್ಷಕಿಯ ಹತ್ಯೆಗೈದ ಉಗ್ರರು

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರುಗಳಾದ ಮಾಧುಸ್ವಾಮಿ, ಆರ್.ಅಶೋಕ್, ಮುನಿರತ್ನ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಉಪಸ್ಥಿತರಿದ್ದರು.

ಬಿಎಸ್​ವೈ ಮಾತನಾಡಿ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸ್ತೇನೆ, ನಮ್ಮೆಲ್ಲರ ಭಾವನೆಗೆ ಗೌರವ ಕೊಟ್ಟು ನಿರ್ಮಲಾ ಸೀತಾರಾಮನ್ ಅವರಿಗೆ ಅವಕಾಶ ಕೊಟ್ಟಿದಾರೆ. ನಿರ್ಮಲಾ ಸೀತಾರಾಮನ್ ಹಾಗೂ ಜಗ್ಗೇಶ್ ಇಬ್ಬರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಕಣಕ್ಕಿಳಿಸಿದ್ದೇವೆ. ಅವರನ್ನೂ ಗೆಲ್ಲಿಸೋ ಪ್ರಯತ್ನ ಮಾಡ್ತಿದ್ದೇವೆ ಎಂದರು.

error: Content is protected !!