ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯಸಭೆ ಸದಸ್ಯ ಜಗ್ಗೇಶ್ – ವಿಡಿಯೋ ನೋಡಿ

Team Newsnap
1 Min Read

ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿರುವ ನಟ ಜಗ್ಗೇಶ್ ಕನ್ನಡದಲ್ಲೇ ಹಾಗೂ ರಾಘವೇಂದ್ರ ಸ್ವಾಮಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಜಗ್ಗೇಶ್ ಗಮನ ಸೆಳೆದರು

ಜಗ್ಗೇಶ್ ಎಂಬ ಹೆಸರಿನವನಾದ ನಾನು, ರಾಜ್ಯಸಭೆಯ ಸದಸ್ಯನಾಗಿ ಚುನಾಯಿತನಾದವನಾಗಿ ಕಾನೂನು ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನಕ್ಕೆ ಸತ್ಯ, ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆ ಎಂದು ಭಾರತದ ಸಾರ್ವಭೌಮತ್ವವನ್ನು ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆಂದು ಮತ್ತು ನಾನು ಈಗ ಕೈಗೊಳ್ಳಲಿರುವ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆ ಎಂದು ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ” ಎಂದು ರಾಜ್ಯಸಭೆ ಸದಸ್ಯ ಜಗ್ಗೇಶ್ ಹೇಳಿದರು.ಇದನ್ನು ಓದಿ –ಕೆ ಆರ್ ಎಸ್ ಭರ್ತಿಗೆ 5 ಅಡಿ ಬಾಕಿ : ಜಲಾಶಯಕ್ಕೆ 40 ಸಾವಿರ ಕ್ಯೂಸೆಕ್ ಒಳಹರಿವು

ರಾಜ್ಯಸಭೆಯಲ್ಲಿ ಬಿಜೆಪಿಯ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ವಿಡಿಯೋವನ್ನು ನಟ ಹಾಗೂ ಮೇಲ್ಮನೆ ಸದಸ್ಯ ಜಗ್ಗೇಶ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.

“ರಾಜ್ಯಸಭೆಯಲ್ಲಿ ಶ್ರದ್ಧೆಯಿಂದ ಪ್ರಮಾಣ ವಚನ ಸಿರಿಗನ್ನಡದಲ್ಲಿ ರಾಯರ ಹೆಸರಲ್ಲಿ ಸ್ವೀಕರಿಸಿದ ನನ್ನ ಬದುಕಿನ ಶ್ರೇಷ್ಠಕ್ಷಣ,” ಎಂದು ಜಗ್ಗೇಶ್ ಬರೆದುಕೊಂಡಿದ್ದಾರೆ.

ಜೂನ್ ತಿಂಗಳಿನಲ್ಲಿ ನಡೆದಿದ್ದ ಮೇಲ್ಮನೆ ಚುನಾವಣೆ: ಕಳೆದ ಜೂನ್ 10ರಂದು ಭಾರತದ 15 ರಾಜ್ಯಗಳ 57 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಅದೇ ದಿನ ಫಲಿತಾಂಶ ಹೊರ ಬಿದ್ದಿತು. ಮತದಾನಕ್ಕೂ ಪೂರ್ವದಲ್ಲಿಯೇ 11 ರಾಜ್ಯಗಳ 41 ಸ್ಥಾನಗಳಿಗೆ ಅವಿರೋಧ ಆಯ್ಕೆ ಆಗಿತ್ತು. ಇದರ ಹೊರತಾಗಿ ಬಾಕಿ ಉಳಿದ 4 ರಾಜ್ಯಗಳ 16 ಸದಸ್ಯರ ಸ್ಥಾನಗಳಿಗೆ ಚುನಾವಣೆಯನ್ನು ನಡೆಸಲಾಗಿತ್ತು.


ನಾಲ್ಕು ಸ್ಥಾನಗಳ ಪೈಕಿ ಬಿಜೆಪಿಯ ನಿರ್ಮಲಾ ಸೀತಾರಾಮನ್, ಜಗ್ಗೇಶ್ ಮತ್ತು ಲೆಹರ್ ಸಿಂಗ್ ಸಿರೋಯಾ ಮೂರು ಸ್ಥಾನಗಳನ್ನು ಪಡೆದುಕೊಂಡರೆ, ಕಾಂಗ್ರೆಸ್‌ನ ಜೈರಾಮ್ ರಮೇಶ್ ಉಳಿದ ಒಂದು ಸ್ಥಾನದಲ್ಲಿ ಗೆಲುವಿನ ನಗೆ ಬೀರಿದ್ದರು.

Share This Article
Leave a comment