ರಾಜ್ಯಸಭೆ ಚುನಾವಣೆ ಅಡ್ಡ ಮತದಾನ: ಇಬ್ಬರು ಶಾಸಕರ ಉಚ್ಟಾಟನೆ – ಅನರ್ಹತೆಯ ಶಿಫಾರಸ್ಸಿಗೂ ನಿರ್ಧಾರ

Team Newsnap
1 Min Read

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಇಬ್ಬರು ಶಾಸಕರನ್ನು ಪಕ್ಷದಿಂದ ಉಚ್ಟಾಟನೆ ಮಾಡಲು ಜೆಡಿಎಸ್ ವರಿಷ್ಠರ ಸಭೆಯಲ್ಲಿ ನಿರ್ಧಾರ ಕೈಗೊಂಡು, ಶಾಸಕ ಸ್ಥಾನದಿಂದಲೇ ಅನರ್ಹತೆ ಮಾಡವಂತೆ ಸ್ಪೀಕರ್ ಗೆ ಶಿಫಾರಸ್ಸು ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ

WhatsApp Image 2022 06 22 at 7.48.20 PM

ಇದನ್ನು ಓದಿ –ಇಂಗ್ಲೆಂಡ್​​ ವಿರುದ್ಧ ಟೆಸ್ಟ್​: ಬಲಿಷ್ಠ ಟೀಂ ಇಂಡಿಯಾದ ಆಟಗಾರರು ಯಾರು? ಪಟ್ಟಿ ಪ್ರಕಟ

ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ.

ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬುಧವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ

ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಖಾಷೆಂಪೂರ್ ಸುದ್ದಿಗಾರರಿಗೆ ಈ ವಿಷಯ ತಿಳಿಸಿ, ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಇಬ್ಬರೂ ಶಾಸಕರನ್ನು ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲು ತಕ್ಷಣವೇ ವಿಧಾನಸಭಾಧ್ಯಕ್ಷರಿಗೆ ದೂರು ನೀಡಲು ಕೂಡ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು ಎಂದರು

ನಾಳೆ ಅಥವಾ ನಾಡಿದ್ದು ಸ್ಪೀಕರ್ ಅವರಿಗೆ ದೂರು ನೀಡಲಾಗುವುದು ಎಂದರು ಇಂದಿನ ಸಭೆಯಲ್ಲಿ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು, ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಹೆಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ಜಪ್ರುಲ್ಲಾ ಖಾನ್, ಎಂ.ಕೃಷ್ಣಾರೆಡ್ಡಿ, ರಾಜಾ ವೆಂಕಟಪ್ಪ ನಾಯಕ, ಕೆ.ಎಂ.ತಿಮ್ಮರಾಯಪ್ಪ, ಟಿ.ಎ.ಶರವಣ, ಶಾರದಾ ಪೂರ್ಯನಾಯಕ್, ರೂತ್ ಮನೋರಮಾ, ವಿ.ನಾರಾಯಣಸ್ವಾಮಿ, ಸಮೃದ್ಧಿ ಮಂಜುನಾಥ್, ವಿಲ್ಸನ್ ರೆಡ್ಡಿ, ಸುಧಾಕರ ಲಾಲ್, ಹೆಚ್.ಎಂ.ರಮೇಶ್ ಗೌಡ, ಆರ್.ಪ್ರಕಾಶ್, ಸಯ್ಯದ್ ಶಫಿ ಉಲ್ಲಾ, ನಾಸಿರ್ ಉಸ್ತಾದ್ ಹಾಗೂ ಕೋರ್ ಕಮಿಟಿ ಸಂಚಾಲಕರಾದ ಕೆ.ಎನ್.ತಿಪ್ಪೇಸ್ವಾಮಿ ಅವರು ಭಾಗವಹಿಸಿದ್ದರು.

Share This Article
Leave a comment