ಈ ಬಾರಿಯ ರಾಜ್ಯೊತ್ಸವ ಪ್ರಶಸ್ತಿಗೊಂದು ಕಳೆ ಬರುತ್ತೆ. ಕಾರಣ ಜನರೇ ಸಾಧಕರನ್ನು ಶಿಫಾರಸಲು ಮಾಡಲು ಮೊದಲ ಬಾರಿಗೆ ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.
ನವೆಂಬರ್ 1 ರಂದು 66 ನೇ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಗುರುತಿಸಿ ಆನ್‌ಲೈನ್ ಮೂಲಕ ಅವರ ಹೆಸರು ಶಿಫಾರಸು ಮಾಡಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ಕುಮಾರ್ ತಿಳಿಸಿದ್ದಾರೆ.
- 66 ಅರ್ಹ ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತೆ.
- ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್ ಮೂಲಕ ಹೆಸರು ಶಿಫಾರಸು ಮಾಡಬಹುದು.
- ಪ್ರಶಸ್ತಿಗಾಗಿ ವಿಶೇಷ ನಮೂನೆಯ ಅರ್ಜಿ ಸಿದ್ಧಪಡಿಸಲಾಗಿದೆ.
- ಮೂರು ಹೆಸರು ಶಿಫಾರಸಲು ಮಾಡಬಹುದು.
- ವಿವಿಧ ಕ್ಷೇತ್ರಗಳ ಸಾಧಕರ ಹೆಸರು, ವಿಳಾಸ ವಿವರ ನೀಡಲು ಅರ್ಜಿ ನಮೂನೆಯಲ್ಲಿ ಅವಕಾಶ ನೀಡಲಾಗಿದೆ.
- ರಾಜ್ಯದ ಮೂಲೆ ಮೂಲೆಯಲ್ಲಿದ್ದು, ಎಲೆಮರೆಕಾಯಿಯಂತಿರುವ ಸಾಧಕರನ್ನು ಗುರುತಿಸಿ ಪೋರ್ಟಲ್ ಮೂಲಕ ತಲುಪಿಸಬೇಕು.
- ಜನರ ಶಿಫಾರಸನ್ನು ತಜ್ಞರ ಸಮಿತಿಗೆ ಪರಿಶೀಲನೆ ನೀಡಲಾಗುತ್ತೆ.
- ಸಮಿತಿ ಪರಿಗಣಿಸುವವರಿಗೆ ಪ್ರಶಸ್ತಿ ಲಭ್ಯ.
- ಕ್ರೀಡೆ ಹೊರತುಪಡಿಸಿದರೆ ಉಳಿದ ಸಾಧಕರು ಕನಿಷ್ಠ60 ವರ್ಷ ಮೇಲ್ಪಟ್ಟವರಾಗಿರಬೇಕು.
- ಇದೇ ಮೊದಲ ಬಾರಿಗೆ ಇಂತಹ ಪ್ರಯೋಗ ಎಂದಿದ್ದಾರೆ ಸಚಿವರು.
- ಇದು ಅತ್ಯಂತ ಪಾರದರ್ಶಕ ಹಾಗೂ ಪ್ರಜಾಪ್ರಭುತ್ವ ಸಿದ್ಧಾಂತಗಳಿಗೆ ಅನುಗುಣವಾಗಿದೆ.
- ಮೊಬೈಲ್ ಮೂಲಕವೂ ಸೇವಾ ಸಿಂಧು ಪೋರ್ಟಲ್ ಪ್ರವೇಶಿಸಬಹುದು.
- ಪ್ರಶಸ್ತಿಗೆ ವ್ಯಕ್ತಿಗಳ ಹೆಸರು ಕಳುಹಿಸಲು ಅಕ್ಟೋಬರ್ 15 ಕೊನೆದಿನ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು