December 22, 2024

Newsnap Kannada

The World at your finger tips!

WhatsApp Image 2022 08 24 at 7.17.11 PM

ಫೆ 8ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯ ಮಟ್ಟದ ಜನಸ್ಪಂದನ ; ಉಚಿತ ಬಸ್‌ ಹಾಗೂ ಉಪಹಾರದ ವ್ಯವಸ್ಥೆ

Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 8ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದು, ತಮ್ಮ ಸಮಸ್ಯೆಯೊಂದಿಗೆ ಬರುವ ಜನರಿಗೆ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಮತ್ತು ರೈಲು ನಿಲ್ದಾಣಕ್ಕೆ ಉಚಿತ ಬಸ್‌ ಪ್ರಯಾಣದ ಸೌಲಭ್ಯ ಇರಲಿದೆ.

ಈ ಸಂದರ್ಭದಲ್ಲಿ ಎಲ್ಲ ಇಲಾಖೆಗಳ ಮುಖ್ಯಸ್ಥರು ಮತ್ತು ಕಾರ್ಯದರ್ಶಿಗಳು ಕಡ್ಡಾಯವಾಗಿ ಹಾಜರಿರಲು ಸೂಚಿಸಲಾಗಿದೆ. ತಮ್ಮ ಸಮಸ್ಯೆಯೊಂದಿಗೆ ಬರುವ ಜನರಿಗೆ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಮತ್ತು ರೈಲು ನಿಲ್ದಾಣಕ್ಕೆ ಉಚಿತ ಬಸ್‌ ಪ್ರಯಾಣದ ಸೌಲಭ್ಯ ಇರಲಿದೆ.

ಕುಡಿಯುವ ನೀರು ಪೂರೈಕೆ, ಲಘು ಉಪಾಹಾರ ಮತ್ತು ಊಟದ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. KSRTCಯ ಅಶ್ವಮೇಧ ಕ್ಲಾಸಿಕ್ ಗೆ ಚಾಲನೆ | ವೈಶಿಷ್ಟ್ಯವನ್ನು ತಿಳಿಯಿರಿ

ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರ್‌ಗಳನ್ನು ಮಾಡಲಾಗಿದೆ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಜನಪರ ಸರ್ಕಾರ ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ.

Copyright © All rights reserved Newsnap | Newsever by AF themes.
error: Content is protected !!