2024ರ ಜ.1ಕ್ಕೆ ರಾಮ ಮಂದಿರ ಲೋಕಾರ್ಪಣೆ: ಅಮಿತ್‌ ಶಾ

Team Newsnap
1 Min Read

ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿದೆ. 2024ರ ಜನವರಿ 1ರಂದು ರಾಮಮಂದಿರ ಲೋಕಾರ್ಪಣೆ ಆಗಲಿದೆ.

ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಈ ಸಂಗತಿಯನ್ನು ತ್ರಿಪುರಾದಲ್ಲಿ ಚುನಾವಣಾ ಪ್ರಚಾರದಲ್ಲಿ ಘೋ಼ಷಿಸಿದರು.ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ – ವೈಮಾನಿಕ ಸಮೀಕ್ಷೆ ಪೂರ್ಣಗೊಳಿಸಿದ ಗಡ್ಕರಿ

ರಾಹುಲ್‌ ಬಾಬಾ(ಗಾಂಧಿ) ಕೇಳಿ, 2024ರ ಜನವರಿ 1 ರಂದು ಬೃಹತ್‌ ರಾಮ ಮಂದಿರ ಉದ್ಘಾಟನೆಯಾಗಲಿದೆ ಎಂದು ಹೇಳಿದರು

ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಶಾ ಅವರು, ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಅಡ್ಡಿಪಡಿಸಿ ಸಮಸ್ಯೆಯನ್ನು ದೀರ್ಘಕಾಲದವರೆಗೆ ನ್ಯಾಯಾಲಯದ ವ್ಯಾಪ್ತಿಯಲ್ಲಿ ಇರಿಸಿತ್ತು. ಸುಪ್ರೀಂ ಕೋರ್ಟ್ ತೀರ್ಪು ಬಂದ ನಂತರ ಮೋದಿಯವರು ದೇವಾಲಯದ ನಿರ್ಮಾಣವನ್ನು ಪ್ರಾರಂಭಿಸಿದರು ಎಂದು ಹೇಳುವ ಮೂಲಕ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

2024ರ ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯುವ ಮೊದಲೇ ರಾಮ ಮಂದಿರ ಉದ್ಘಾಟನೆಯಾಗಲಿದೆ. ಪ್ರತಿ ಚುನಾವಣೆ ಸಂದರ್ಭದಲ್ಲಿ ಬಿಡುಗಡೆಯಾಗುವ ಪ್ರಣಾಳಿಕೆಯಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುತ್ತೇವೆ ಎಂದು ಬಿಜೆಪಿ ಭರವಸೆ ನೀಡುತ್ತಿತ್ತು.

Share This Article
Leave a comment