ರಾಮನಗರ ಕುಂಭಾಪುರ ಗೇಟ್ ಬಳಿ ಸೋಮವಾರ ಬೆಳಿಗ್ಗೆ ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಮರ ಬಿದ್ದು ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಸುಂದ್ರಶ್ (49) ತನ್ಮಯ್ (9) ಮೃತ ದುದೈವಿಗಳು.ಗಾಯಗೊಂಡ ಮೂವರನ್ನು ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ,
ಈ ಘಟನೆ ಸಂದರ್ಭದಲ್ಲಿ ಕಾರಿನಲ್ಲಿದ್ದ ಶೀಲ, ಗಾನವಿ, ಸಾನವಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಒಂದೇ ಕುಟುಂಬ ಐದು ಮಂದಿ ಕಾರಿನಲ್ಲಿ ಮದ್ದಣುರಿನಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಬೆಳಗ್ಗೆ 6 ಗಂಟೆ ಸಮಯದಲ್ಲಿ ಘಟನೆ ನಡೆದಿದೆ.
ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತ ಮರ ರಸ್ತೆಗೆ ಉರುಳಿ ಕಾರಿನ ಮೇಲೆ ಬಿದ್ದ ಪರಿಣಾಮ ಬೆಂಗಳೂರು ಮೈಸೂರು ಹೆದ್ಧಾರಿ ಕೆಲ ಸಮಯ ಬಂದ್ ಆಗಿತ್ತು.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ಮರ ತೆರವು ಮಾಡಿ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
More Stories
ಅರಣ್ಯ ಪ್ರದೇಶದಲ್ಲಿ ಪಾರ್ಟಿ – ಪ್ರಶ್ನಿಸಿದ ಪೊಲೀಸರ ಮೇಲೆಯೇ ರೌಡಿಶೀಟರ್ಗಳ ಹಲ್ಲೆ
ರಾಮನಗರ: ಹಾಸ್ಟೆಲ್ನಲ್ಲೇ ನರ್ಸಿಂಗ್ ವಿದ್ಯಾರ್ಥಿನಿಯ ಆತ್ಮಹತ್ಯೆ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು