December 24, 2024

Newsnap Kannada

The World at your finger tips!

43f55933 e608 4b78 bcde 2c7d6017dc24

ರಾಮನಗರ : ಕೋವಿಡ್ ಬಗ್ಗೆ ಗರಿಷ್ಠ ಎಚ್ಚರಿಕೆ ಬೇಕು – ಬಿ ವೆಂಕಟಪ್ಪ ಕರೆ

Spread the love

ಕೋವಿಡ್ ಎರಡನೇ ಅಲೆ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿಬ ಎಲ್ಲರೂ ಗರಿಷ್ಠ ಎಚ್ಚರಿಕೆ ವಹಿಸಬೇಕು ಎಂದು ರಾಮನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ವೆಂಕಟಪ್ಪ ತಿಳಿಸಿದರು.

ರಾಮನಗರ ತಾಲ್ಲೂಕಿನ ಮಾಯಗಾನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಯೂತ್ ರೆಡ್ ಕ್ರಾಸ್ ಸಂಸ್ಥೆ ರಾಮನಗರ ಜಿಲ್ಲಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಮಾಸ್ಕ್ ಹಾಗೂ ಸೋಪ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವೆಂಕಟಪ್ಪ. ಕೋವಿಡ್ ನಿರ್ಮೂಲನೆಯಾಗಿದೆ ಎಂದು ಭಾವಿಸಬಾರದು. ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಹಾಗೂ ಸಾಮಾಜಿಕ ಅಂತರದ ನಿಯಮವನ್ನು ಪಾಲಿಸದೆ ಇದ್ದರೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತವೆ. ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ಶಾಖೆಯ ಜಿಲ್ಲಾ ಪ್ರತಿನಿಧಿ ವಿ. ಬಾಲಕೃಷ್ಣ ಮಾತನಾಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸೋಮಶೇಖರಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಲಲಿತಾಬಾಯಿ, ಜಿಲ್ಲಾ ಸಮನ್ವಯಾಧಿಕಾರಿ ಎಂ. ಮಹೇಶ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಸ್. ಶಂಕರಯ್ಯ, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಪಿ.ಎಚ್. ರೇಣುಕಪ್ಪ, ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಈಶ್ವರ್ ಎಂ. ನಾಯಕ್, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಂಗನಾಥ್, ಸರ್ಕಾರಿ ಐಟಿಐ ಕಾಲೇಜಿನ ಉಪನ್ಯಾಸಕ ಕೆಂಪರಾಜು, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷ ಎಚ್.ವಿ. ಶೇಷಾದ್ರಿ ಅಯ್ಯರ್, ಕಾರ್ಯದರ್ಶಿ ಕೆ.ಎಚ್. ಚಂದ್ರಶೇಖರಯ್ಯ, ಖಜಾಂಚಿ ಎಂ. ಪರಮಶಿವಯ್ಯ, ಯೂತ್ ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷ ಎಸ್. ರುದ್ರೇಶ್ವರ, ಪದಾಧಿಕಾರಿಗಳಾದ ಸಿಖಬತ್ತುಲ್ಲಾ ಖಾನ್, ಕೆಂಪೇಗೌಡ, ಅಬ್ದುಲ್ ಸತ್ತಾರ್ ಇದ್ದರು.

Copyright © All rights reserved Newsnap | Newsever by AF themes.
error: Content is protected !!