Main News

ರಾಮನಗರ ನಗರಸಭೆ ಕಾಂಗ್ರೆಸ್ ಅಧಿಕಾರಕ್ಕೆ : ಜೆಡಿಎಸ್ , ಬಿಜೆಪಿಗೆ ಮುಖಭಂಗ

ರಾಮನಗರ ನಗರಸಭೆ ಅಧಿಕಾರದ ಚುಕ್ಕಾಣಿಯನ್ನು ಕಾಂಗ್ರೆಸ್​ ಹಿಡಿದಿದೆ.‌ ಬಿಜೆಪಿಯ ನಾಯಕ, ಡಿಸಿಎಂ ಡಾ. ಅಶ್ವತ್ಥ್​​ ನಾರಾಯಣ್ ಹಾಗೂ ಮಾಜಿ‌ ಮುಖ್ಯ ಮಂತ್ರಿ ಎಚ್​ಡಿಕೆಗೆ ಮುಖಭಂಗವಾಗಿದೆ.

ರಾಮನಗರ ನಗರಸಭೆಯಲ್ಲಿ ಕಾಂಗ್ರೆಸ್ ಸ್ಪಷ್ಟ‌ ಬಹುತದೊಂದಿಗೆ ಕಾಂಗ್ರೆಸ್​ ಅಧಿಕಾರದ ಚುಕ್ಕಾಣಿ ಹಿಡಿದಿದೆ.

ಒಟ್ಟು 31 ವಾರ್ಡ್​ಗಳ ಪೈಕಿ ಕಾಂಗ್ರೆಸ್ 19  ಹಾಗೂ ಜೆಡಿಎಸ್​​​ 11 ವಾರ್ಡ್​ನಲ್ಲಿ ಗೆಲುವು ಸಾಧಿಸಿದೆ. ಒಂದು ವಾರ್ಡ್​ನಲ್ಲಿ ಪಕ್ಷೇತರ ಅಭ್ಯರ್ಥಿ ಗೆದ್ದಿದ್ದಾರೆ. ಬಿಜೆಪಿ ಒಂದು ವಾರ್ಡ್​ನಲ್ಲೂ ಖಾತೆ ತೆರೆದಿಲ್ಲ.

ಈ ಚುನಾವಣಾ ಫಲಿತಾಂಶದಿಂದ
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಡಿಸಿಎಂ ಅಶ್ವತ್ಥ್ ನಾರಾಯಣ್​ಗೆ  ಮುಖಭಂಗವಾಗಿದೆ.

ಹಾಲಿ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಇದ್ದರೂ ರಾಮನಗರದಲ್ಲಿ 11 ಸ್ಥಾನಗಳಿಗೆ ಜೆಡಿಎಸ್ ತೃಪ್ತಿ ಪಟ್ಟುಕೊಂಡಿದೆ.

ಸ್ವತಃ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಅಶ್ವತ್ಥ್​​​ ನಾರಾಯಣ್ ಎಲೆಕ್ಷನ್​​ಗೆ ಅಬ್ಬರದ ಪ್ರಚಾರ ನಡೆಸಿದ್ದರು. 20 ವಾಡ್೯ಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಅಂತಾ ಹೇಳಿದ್ದರು. ಆದರೆ 1 ವಾರ್ಡ್​​​ ನಲ್ಕೂ ಗೆದ್ದಿಲ್ಲ.

Team Newsnap
Leave a Comment
Share
Published by
Team Newsnap

Recent Posts

ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ

ಮೈಸೂರು : ಶ್ರೀನಿವಾಸ್‌ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ‌ ಮಗಳು ಪ್ರತಿಮಾ ಪ್ರಸಾದ್‌… Read More

April 29, 2024

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More

April 29, 2024

ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ

ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More

April 28, 2024

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More

April 28, 2024

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024