ಅಶ್ಲೀಲ ವಿಡಿಯೋ ಸೋರಿಕೆಯಾಗುತ್ತಿ ದ್ದಂತೆ ನನ್ನದೇನು ತಪ್ಪಿಲ್ಲ ದೆಹಲಿಗೆ ಹೋಗಿ ಬಿಜೆಪಿ ವರಿಷ್ಠರನ್ನು ಭೇಟಿಯಾಗುತ್ತೇನೆಂದು ಹೇಳಿದ್ದ ಸಚಿವ ರಮೇಶ್ ಜಾರಕಿಹೊಳಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.
ರಮೇಶ್ ಜಾರಕಿಹೊಳಿ ರಾತ್ರಿಯೇ ದೆಹಲಿಗೆ ತೆರಳಬೇಕಿತ್ತು. ರಾತ್ರಿ ಹನ್ನೊಂದು ಗಂಟೆಯಿಂದ ಮನೆಯಿಂದ ಹೊರಟ ಜಾರಕಿಹೊಳಿ ಏರ್ಪೋರ್ಟ್ ರಸ್ತೆಯಲ್ಲಿ ಮಾಧ್ಯಮಗಳ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾರೆ.
ಇತ್ತ ಮನೆಗೂ ವಾಪಸ್ ಬಂದಿಲ್ಲ. ಅತ್ತ ವಿಮಾನ ನಿಲ್ದಾಣದಲ್ಲೂ ಅವರ ಸುಳಿವಿಲ್ಲ. ಖಾಸಗಿ ಕಾರಿನಲ್ಲಿ ರಾತ್ರೋರಾತ್ರಿ ಅಜ್ಞಾತ ಸ್ಥಳಕ್ಕೆ ರಮೇಶ್ ಜಾರಕಿಹೊಳಿ ತೆರಳಿದ್ದಾರೆನ್ನಲಾಗಿದೆ.
ನಿನ್ನೆ ಮಾಧ್ಯಮದವರ ಜೊತೆ ಮಾತನಾಡಿದ್ದ ನಾನು ಯಾವ ತಪ್ಪೂ ಮಾಡಿಲ್ಲ. ತಪ್ಪಿತಸ್ಥ ಎಂದು ದೃಢಪಟ್ಟರೆ ಆಗ ರಾಜೀನಾಮೆಯ ಪ್ರಶ್ನೆ ಉದ್ಭವಿಸುತ್ತದೆ ಎಂದಿದ್ದಾರೆ.
ರಾಸಲೀಲೆ ವಿಡಿಯೋ ಬಗ್ಗೆ ಸಮಗ್ರ ತನಿಖೆಯಾಗಲಿ ಎಂದು ಸಿಎಂಗೆ ಮನವಿ ಮಾಡುತ್ತೇನೆ. ಈ ಸುದ್ದಿ ಬಿತ್ತರವಾಗು ವಾಗ ನಾನು ಮೈಸೂರಿನಲ್ಲಿದ್ದೆ. ನೋಡಿ ಆಶ್ಚರ್ಯವಾಯಿತು. ಪಾಪ, ಆ ದೃಶ್ಯಗಳಲ್ಲಿ ಇರುವ ಯುವತಿ ಯಾರು ಅಂತ ನನಗೆ ಗೊತ್ತಿಲ್ಲ. ದಿನೇಶ್ ಕಲ್ಲಹಳ್ಳಿ ಯಾರು ಅಂತಲೂ ಗೊತ್ತಿಲ್ಲ ಎಂದರು.
ನನ್ನ ಮೇಲಿನ ಆರೋಪ ಸಾಬೀತಾದರೆ ನಾನು ರಾಜಕೀಯದಿಂದಲೇ ನಿವೃತ್ತಿ ಹೊಂದುತ್ತೇನೆ. ಸಿಎಂ ಬಿಎಸ್ವೈ ಭೇಟಿ ಮಾಡಿದ ಬಳಿಕ ದೆಹಲಿಗೆ ತೆರಳಿ ವರಿಷ್ಠರ ಜತೆ ಚರ್ಚೆ ನಡೆಸುತ್ತೇನೆಂದು ಹೇಳಿದ್ದರು.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ