ಅತ್ಯಾಚಾರ ಕುರಿತು ಹಗುರುವಾಗಿ ಸದನದಲ್ಲಿ ಮಾತನಾಡಿದ್ದ ಹೇಳಿಕೆಗೆ ಖಂಡನೆ ವ್ಯಕ್ತವಾಗುತ್ತಿದ್ದಂತೆಯೇ ಮಾಜಿ ಸ್ಪೀಕರ್ ರಮೇಶ್ ಕುಮಾರ್ ರಾಜ್ಯದ ಜನರ ಕ್ಷಮೆಯಾಚಿಸಿದ್ದಾರೆ.
ಟ್ವೀಟ್ ಮಾಡಿರುವ ಮಾಜಿ ಸ್ಪೀಕರ್, ‘ಅತ್ಯಾಚಾರ’ ಸಂಬಂಧ ಅಧಿವೇಶನದಲ್ಲಿ ನೀಡಿರುವ ನನ್ನ ಹೇಳಿಕೆ ಕುರಿತು ಎಲ್ಲರಿಗೂ ನನ್ನ ಪ್ರಾಮಾಣಿಕ ಕ್ಷಮೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ.
ಅತ್ಯಂತ ಹೇಯವಾದ ಅಪರಾಧವನ್ನು ಅಲಕ್ಷಿಸುವುದು ನನ್ನ ಉದ್ದೇವಾಗಿರಲಿಲ್ಲ. ಮಾತಿನ ಭರದಲ್ಲಿ ಆ ಮಾತು ಬಂದಿದೆ. ಇನ್ಮುಂದೆ ಮಾತನಾಡುವಾಗ ಎಚ್ಚರಿಕೆ ವಹಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಗುರುವಾರ ವಿಧಾನಸಭೆಯಲ್ಲಿ ಮಾತನಾಡುತ್ತಾ ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಆಗದಿದ್ರೆ ಮಲಗಿ ಆನಂದಿಸಿ ಎಂದು ರಮೇಶ್ ಕುಮಾರ್ ಹೇಳಿಕೆ ನೀಡಿದ್ದರು.
ರಮೇಶ್ ಕುಮಾರ್ ಈ ರೀತಿ ಹೇಳುತ್ತಿದ್ದಂತೆಯೇ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವು ಮಂದಿ ಸದಸ್ಯರು ಇದನ್ನು ತಮಾಷೆಯಾಗಿ ತೆಗೆದುಕೊಂಡರು.
ಇತ್ತ ರಮೇಶ್ ಅವರ ಈ ಹೇಳಿಕೆಗೆ ಭಾರೀ ಖಂಡನೆ ವ್ಯಕ್ತವಾಗಿತ್ತು. ಅಲ್ಲದೆ ಬಿಜೆಪಿ ಶಾಸಕಿಯರೆಲ್ಲರೂ ಈ ಹೇಳಿಕೆ ವಿರುದ್ಧ ಕಪ್ಪು ಬಟ್ಟೆ ಪ್ರದರ್ಶನ ಮಾಡಿ ಪ್ರತಿಭಟನೆ ನಡೆಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
- ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
- ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
- ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
- ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ
- ಕೆನಡಾವನ್ನು ಅಮೆರಿಕಾದ 51ನೇ ರಾಜ್ಯವನ್ನಾಗಿ ಮಾಡಲು ಟ್ರಂಪ್ ಆರ್ಥಿಕ ಒತ್ತಡದ ಬೆದರಿಕೆ
More Stories
ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ