ರಮೇಶ್ ಜಾರಕಿಹೊಳಿ ಅವರಿಗೆ ಮತ್ತೆ ಸಚಿವ ಸ್ಥಾನ ನೀಡುವ ಬಗ್ಗೆ ನಮ್ಮ ಸಹಮತವಿದೆ. ಸರ್ಕಾರ ರಚನೆಯಾಗಲು ರಮೇಶ್ ಜಾರಕಿಹೊಳಿ ಶ್ರಮ ಸಾಕಷ್ಟಿದೆ. ಈಗ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಕೇಂದ್ರದ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅಶೋಕ್, ಈಗಾಗಲೇ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದೆ, ಪಕ್ಷದಲ್ಲಿ ಸಮನ್ವಯತೆ ಇಲ್ಲ. ಪಕ್ಷದ ರೈಲು ಇನ್ನೂ ಟ್ರ್ಯಾಕ್ ಗೆ ಇಳಿದಿಲ್ಲ. ಕೇಂದ್ರದಲ್ಲೂ ಸಹ ಸಮರ್ಥ ವಿರೋಧ ಪಕ್ಷದ ನಾಯಕರು ಇಲ್ಲದೆ ತಬ್ಬಿಬ್ಬಾಗಿದೆ. ಇಂತಹ ಸ್ಥಿತಿಯಲ್ಲಿ ಕಾಂಗ್ರೆಸ್ ನಿಂದ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದರು.
ಜಾತಿ ರಾಜಕೀಯದಲ್ಲಿ ತೊಡಗಿರುವ ಪಕ್ಷದಲ್ಲಿ ಸಂವಿಧಾನ ಬದಲಾವಣೆ ಮೂಲಕ ಜಾತಿಗೊಂದರಂತೆ ಸಿಎಂ ಕುರ್ಚಿಯನ್ನು ಸೃಷ್ಟಿ ಮಾಡಬೇಕು ಅಷ್ಟೇ. ಅದು ಸಹ ಕಷ್ಟ ಸಾಧ್ಯ ಆದ್ದರಿಂದ ಕಾಂಗ್ರೆಸ್ ರಾಜ್ಯದಲ್ಲಿ ಮುಂದಿನ 20 ವರ್ಷ ಅಧಿಕಾರಕ್ಕೆ ಬರುವುದು ಸುಳ್ಳು ಎಂದು ಭವಿಷ್ಯ ನುಡಿದರು.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ